ಕರಿಕೆ, ಜು. ೨೦: ಜಿಲ್ಲೆಯ ಗಡಿ ಗ್ರಾಮದಲ್ಲಿರುವ ಏಕೈಕ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಅಗತ್ಯ ಔಷಧಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರಿಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್. ಬಾಲಚಂದ್ರ ನಾಯರ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಜಿಲ್ಲಾ ಕೇಂದ್ರದಿAದ ೭೦ ಕಿ.ಮಿ. ದೂರದಲ್ಲಿದ್ದು ಒಂಟಿ ಗ್ರಾಮವಾಗಿದ್ದು ತುರ್ತು ಚಿಕಿತ್ಸೆ ಪಡೆಯಲು ಮಡಿಕೇರಿಗೆ ಬರಲು ದೂರವಾದ ಕಾರಣ ಕೇರಳದ ಪನತ್ತಡಿ ಪಂಚಾಯಿತಿಯ ಪಾಣತ್ತೂರು ಆಸ್ಪತ್ರೆಗೆ ತೆರಳಬೇಕಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಅಥವಾ ಕಾಂಞAಗಾಡಿಗೆ ತೆರಳಬೇಕಿದೆ. ಇದೀಗ ಮಳೆಗಾಲವಾಗಿದ್ದು ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಕೂಡಲೇ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಅಗತ್ಯ ಔಷಧಿಗಳನ್ನು ಸರಬರಾಜು ಮಾಡಲು ಕ್ರಮ ವಹಿಸುವಂತೆ ಕೋರಿದ್ದಾರೆ.