ಕೂಡಿಗೆ, ಜು. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ವಾರ್ಡ್ ೧ರ ಪರಿಶಿಷ್ಟ ಪಂಗಡ (ಮೀಸಲು ಕ್ಷೇತ್ರದ) ಸದಸ್ಯರ ಅಕಾಲಿಕ ಮರಣದಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಆರ್. ಸುರೇಶ್ ಪರ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ಕೂಡ್ಲೂರುವಿನಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲಿಸುವ ದೃಷ್ಟಿಯಿಂದ ಇತರೆ ರಾಜಕೀಯ ಪಕ್ಷಗಳನ್ನು ತೊರೆದು ಅನೇಕ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕರು ಕೂಡ್ಲೂರು ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಕಾರ್ಯಕರ್ತರ ನ್ನೊಳಗೊಂಡAತೆ ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ಮಾಡಿ ಲಿಖಿತ ರೂಪದಲ್ಲಿ ಮಾಹಿತಿ ಕಲೆ ಹಾಕಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಪ್ರಮುಖರಾದ ಗೋವಿಂದ್, ರಾಜಚಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಕುಮಾರ್, ಹೀರಪ್ಪ, ಫಿಲೋಮಿನ, ಅರುಣ್‌ರಾವ್, ಜಗದೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.