ಚೆಯ್ಯಂಡಾಣೆ, ಜು. ೨೧: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳೀಯ ಬ್ಯಾಂಕ್ ಆಫ್ ಬರೋಡಾ ಶಾಖೆಯ ೧೧೬ನೇ ಸಂಸ್ಥಾಪನಾ ದಿನದ ಅಂಗವಾಗಿ ವಾಟರ್ ಫಿಲ್ಟರ್ ಹಾಗೂ ಊಟದ ತಟ್ಟೆಯನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭ ಬ್ಯಾಂಕಿನ ವ್ಯವಸ್ಥಾಪಕ ಸಿ.ವಿ. ಮಹೇಶ್ ವರ್ಮಾ, ಸೀನಿಯರ್ ಆಫೀಸರ್ ರಾಜೀವ್ ಹಾಗೂ ಸಿಬ್ಬಂದಿಗಳು, ಶಾಲೆಯ ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.