ಮಹಿಳೆಯರ ಬೆತ್ತಲೆ ಪರೇಡ್ : ಪ್ರಧಾನಿ ಮೋದಿ ಆಕ್ರೋಶ
ನವದೆಹಲಿ, ಜು. ೨೦: ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ ೧೪೦ ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸಂಸತ್ತು ಭವನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದ್ದು ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದಿದ್ದಾರೆ. ಈ ವಿಷಯ ಕೇಳಿ ನನ್ನ ಹೃದಯ ತುಂಬಾ ನೋವಾಗಿದ್ದು ಸಿಟ್ಟಿನಿಂದ ಕುದಿಯುತ್ತಿದೆ. ನಮ್ಮ ಮುಂದೆ ಬಂದಿರುವ ಮಣಿಪುರದ ಘಟನೆ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಒತ್ತಾಯಿಸುತ್ತೇನೆ - ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ಬಲವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದು ರಾಜಸ್ಥಾನ, ಮಣಿಪುರ, ಛತ್ತೀಸ್ಗಢದಲ್ಲಿ ಅಥವಾ ದೇಶದ ಯಾವುದೇ ಮೂಲೆಯಲ್ಲಿ ಯಾವುದೇ ಘಟನೆಯಾಗಿರಲಿ, ರಾಜಕೀಯದಿಂದ ಹೊರಬಂದು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದರು. ಮುಂಗಾರು ಅಧಿವೇಶನದುದ್ದಕ್ಕೂ ಎಲ್ಲಾ ಪಕ್ಷಗಳ ಸದಸ್ಯರು ಸದನದಲ್ಲಿ ಫಲಪ್ರದ ಚರ್ಚೆ ನಡೆಸಿ ಕಲಾಪ ಸುಗಮವಾಗಿ ಸಾಗುವಂತೆ ಸಹಕಾರ ನೀಡಿ, ದೇಶದ ಜನರ ಹಿತಾಸಕ್ತಿಗೆ ಪೂರಕವಾದ ಚರ್ಚೆಗಳಲ್ಲಿ ತೊಡಗಿ ಮಸೂದೆಯನ್ನು ಅಂಗೀಕರಿಸಲು ಸಹಕಾರ ನೀಡುವಂತೆ ಇದೇ ಸಂದರ್ಭದಲ್ಲಿ ಸದನ ಸದಸ್ಯರನ್ನು ಪ್ರಧಾನಿ ಮೋದಿ ಕೇಳಿಕೊಂಡರು.
ಕಾAಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ
ಬೆಂಗಳೂರು, ಜು. ೨೦: ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು. ಸ್ಪೀಕರ್ ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆ ಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ. ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಎಂದು ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣ ಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಎಂದು ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ. ಈ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಂದಿದೆ. ಮೂರೂವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ. ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಜನ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಉಗ್ರ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂರ್ರಾಷ್ಟಿçÃಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.
ಕಾAಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ
ಬೆಂಗಳೂರು, ಜು. ೨೦: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆ ಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. ಈ ನಡುವೆ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಕುರಿತು ಚರ್ಚೆ ನಡೆಸಿದ್ದಾರೆ. ಈ ಕುರಿತ ಫೋಟೋಗಳನ್ನು ಟ್ವೀಟ್ ಮಾಡಿರುವ ವಿಜಯೇಂದ್ರ, ಅಮಿತ್ ಶಾ ಭೇಟಿ ಸಂದರ್ಭದಲ್ಲಿ ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊAಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯ ಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ. ವಿಧಾನಸಭೆ ಹಾಗೂ ಹೊರಗೆ ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ ವಿರುದ್ಧ ಹೋರಾಟ ರೂಪಿಸುವ ಕುರಿತು ಜೆ.ಪಿ. ನಡ್ಡಾರಿಂದ ಮಾರ್ಗದರ್ಶನ ಪಡೆದಿರುವುದಾಗಿ ಟ್ವೀಟ್ ಮಾಡಿದ್ದಾರೆ.
ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ ೧೩ಕ್ಕೆ ಏರಿಕೆ
ರಾಯಗಢ, ಜು. ೨೦: ಮಹಾರಾಷ್ಟçದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಟ ೧೨ ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಖಲಾಪುರ್ ತಹಸಿಲ್ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ೧೨ ಮಂದಿ ಸಾವನ್ನಪ್ಪಿದ್ದು, ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೂ ಕುಸಿತದಿಂದ ಸುಮಾರು ೪೮ ಕುಟುಂಬಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಲಾ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟç ಸರ್ಕಾರ ಭರಿಸಲಿದೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡಾ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದಾರೆ.
ಸಿಡಿಲು ಬಡಿದು ಭಾರತೀಯ ವಿದ್ಯಾರ್ಥಿನಿ ಮೆದುಳಿಗೆ ಹಾನಿ
ಹೂಸ್ಟನ್, ಜು. ೨೦: ಅಮೆರಿಕದ ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಸಿಡಿಲು ಬಡಿದು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನ ಓದುತ್ತಿದ್ದ ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು ಜುಲೈ ೪ನೇ ವಾರಾಂತ್ಯದಲ್ಲಿ ಸ್ಯಾನ್ ಜಸಿಂಟೋ ಸ್ಮಾರಕ ಉದ್ಯಾನವನದಲ್ಲಿ ತನ್ನ ಸ್ನೇಹಿತರೊಂದಿಗೆ ಕೊಳದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಆಕೆಯ ಮೆದುಳಿಗೆ ತೀವ್ರ ಹಾನಿಯಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸುಸ್ರೂಣ್ಯಗೆ ಸಿಡಿಲು ಬಡಿದು ಕೊಳಕ್ಕೆ ಬಿದ್ದಿದ್ದಾಳೆ. ಬಳಿಕ, ಹೃದಯ ಸ್ತಂಭನಕ್ಕೆ ಒಳಗಾಗಿದ್ದಳು. ಈಗ ಮೆದುಳು ಹಾನಿಗೊಳಗಾಗಿದೆ ಎಂದು ಸೋದರ ಸಂಬAಧಿ ಸುರೇಂದ್ರ ಕುಮಾರ್ ಕೋಟ ತಿಳಿಸಿದ್ದಾರೆ. ‘ಆಕೆಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ’ ಎಂದು ಸುರೇಂದ್ರ ಹೇಳಿದರು. ಸುಸ್ರೂಣ್ಯ, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಬಂದಿದ್ದರು. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನದ ಸ್ನಾತಕ ಪದವಿಯನ್ನು ಬಹುತೇಕ ಮುಗಿಸಿ, ಇಂಟರ್ಶಿಪ್ಗಾಗಿ ಕಾಯುತ್ತಿದ್ದರು. ಈ ನಡುವೆ ಈ ದುರಂತ ಸಂಭವಿಸಿದೆ. ಕುಟುಂಬವು ವೈದ್ಯಕೀಯ ವೆಚ್ಚಗಳಿಗೆ ನೆರವು ಕೋರಿ ಉoಈuಟಿಜಒe ಅನ್ನು ರಚಿಸಿದೆ. ಆಕೆಯ ಸಾಮಾಜಿಕ ಮಾಧ್ಯಮ ಪುಟದಲ್ಲಿ, ಕುಟುಂಬವು ಸಹಾಯಕ್ಕಾಗಿ ಮನವಿ ಮಾಡಿದೆ, ಸುಸ್ರೂಣ್ಯ ಶೀಘ್ರವೇ ಸಹಜ ಸ್ಥಿತಿಗೆ ಮರಳಲು ಸಹಾಯ ಮಾಡುವಂತೆ ಕೋರಿದೆ. ಆಕೆಯನ್ನು ಭಾರತಕ್ಕೆ ಏರ್ಲಿಫ್ಟ್ ಮಾಡುವ ಅವಶ್ಯಕತೆಯಿದೆ.