ವೀರಾಜಪೇಟೆ, ಜು. ೨೦: ವೀರಾಜಪೇಟೆ ತಾಲೂಕುವಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕವಾಗಿ ಅಧಿಕಾರವನ್ನು ವಹಿಸಿಕೊಂಡಿರುವ ಎಂ. ಪ್ರಕಾಶ್ ಅವರನ್ನು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ.ಫಾ. ಐಸಾಕ್ ರತ್ನಕರ್ ಅವರು ವಿದ್ಯಾಸಂಸ್ಥೆಗಳ ಪರವಾಗಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂತ ಅನ್ನಮ್ಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿಯರಾದ ಸಿಸ್ಟರ್ ರೋಸಿ ವಿನ್ನಿ ಡಿಸಾ, ಸಿಸ್ಟರ್ ಐಡಾ ಪ್ರೇಮ ಡಿಸೋಜಾ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.