ಕೂಡಿಗೆ, ಜು. ೨೦: ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೨೫ ವರ್ಷಗಳ ಕಾಲ ಸುದೀರ್ಘ ಅವಧಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ವೃತ್ತಿ ನಿರ್ವಹಿಸಿ ಇದೀಗ ಆಲೂರು-ಸಿದ್ದಾಪುರ ಶಾಲೆಗೆ ವರ್ಗಾವಣೆಯಾದ ಹೆಚ್.ಪಿ. ಕರುಂಬಯ್ಯ ಅವರನ್ನು ಶಾಲಾಭಿವೃದ್ಧಿ ಸಮಿತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು..
ಮುಖ್ಯ ಅತಿಥಿಯಾಗಿದ್ದ ಸಾಹಿತಿ ಭಾರದ್ವಾಜ್ ಕಣಿವೆ ಮಾತನಾಡಿ, ಒಂದು ಕುಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ ಓದುವ ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ರಾಜ್ಯ ಹಾಗೂ ರಾಷ್ಟçಮಟ್ಟದವರೆಗೂ ಕೊಂಡೊಯ್ಯುವ ಮೂಲಕ ವಿದ್ಯಾರ್ಥಿ ಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಶ್ರಮಿಸಿದ್ದಾರೆ ಎಂದರು.
ಸನ್ಮಾನ ಸ್ವೀಕರಿಸಿ ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ಪಿ. ಕರುಂಬಯ್ಯ ಮಾತನಾಡಿದರು. ಅತಿಥಿಗಳಾಗಿ ರಾಜ್ಯ ಶಿಕ್ಷಕರ ಸಂಘದ ಪದಾಧಿಕಾರಿ ಹೆಚ್.ಎಸ್. ಚೇತನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಆರ್. ಶ್ರೀನಿವಾಸ್, ಕಸಾಪ ಮಾಜಿ ಅಧ್ಯಕ್ಷ ಕೆ.ಎಸ್. ಮೂರ್ತಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿರೂಪಾಕ್ಷ, ಉಪಾಧ್ಯಕ್ಷೆ ಶಶಿಕಲಾ, ಸದಸ್ಯ ರಾಜು, ಸಿ.ಆರ್.ಪಿ. ಆದರ್ಶ, ಶಾಲಾ ಮುಖ್ಯ ಶಿಕ್ಷಕಿ ಕಸ್ತೂರಿ, ಯೋಗಮಣಿ, ವಿದ್ಯಾಮಣಿ ಇದ್ದರು. ಶಿಕ್ಷಕಿ ಜ್ಯೋತಿ ನಿರೂಪಿಸಿ, ಶಿಕ್ಷಕ ಜಯಣ್ಣ ಸ್ವಾಗತಿಸಿ, ವಂದಿಸಿದರು.