ಕೂಡಿಗೆ, ಜು. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸುವ ಕಾಮಗಾರಿಗೆ ವಾರ್ಡ್ ಸದಸ್ಯ ಕೆ.ಬಿ. ಷಂಶುದ್ದೀನ್ ಚಾಲನೆ ನೀಡಿದರು.

ಸಾರ್ವಜನಿಕರಿಗೆ ಬೆಳಕಿನ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ಅಮೃತ ಗ್ರಾಮ ಯೋಜನೆಯ ಅಡಿಯಲ್ಲಿ ಒಂದು ಲಕ್ಷ ರೂ ವೆಚ್ಚದ ಹೈಮಾಸ್ಟ್ ದೀಪವನ್ನು ಅಳವಡಿಸಲು ಸ್ಧಳ ಪರಿಶೀಲನೆ ನಡೆಸಿ, ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಇದ್ದರು.