ಕೂಡಿಗೆ, ಜು. ೨೧: ಕರ್ನಾಟಕ ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಎನ್.ಎಸ್.ಎಸ್. ಘಟಕದ ಸಹಯೋಗದಲ್ಲಿ ಕುಶಾಲನಗರ ಸಮೀಪದ ರಸಲ್‌ಪುರ ಕಾವೇರಿ ನದಿ ದಂಡೆಯAಚಿನಲ್ಲಿ ವನ ಮಹೋತ್ಸವ ಹಾಗೂ ಗೋ ಗ್ರೀನ್ ಅಭಿಯಾನದಡಿ ವಿವಿಧ ೬೦೦ ಅರಣ್ಯ ಸಸಿಗಳನ್ನು ನೆಡುವ ಪರಿಸರ ಕಾರ್ಯಕ್ರಮದ ಅಭಿಯಾನ ನಡೆಸಲಾಯಿತು.

ನದಿ ಪಾತ್ರದಲ್ಲಿ ಹಸಿರು ಪರಿಸರ ನಿರ್ಮಾಣದ ಮಹತ್ವ ಕುರಿತು ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ನಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದ್ದು, ಎಲ್ಲರೂ ಜೊತೆಗೂಡಿ ಹಸಿರು ಹೊದಿಕೆ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕು ಎಂದು ಮನವಿ ಮಾಡಿದರು.

ಕುಶಾಲನಗರ ವಲಯ ಅರಣ್ಯಾ ಧಿಕಾರಿ ಕೆ.ವಿ. ಶಿವರಾಂ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ನಾಗರಿಕರ ಸಹಭಾಗಿತ್ವದಲ್ಲಿ ಶಾಲಾ- ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ೨೫೦೦ ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನ ಹಮ್ಮಿಕೊಳ್ಳ ಲಾಗಿದೆ. ಇಂತಹ ಹಸಿರು ನಿರ್ಮಾಣ ಅಭಿಯಾನದ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ ಎಂದರು. ಕಾವೇರಿ ನದಿ ಪಾತ್ರದಲ್ಲಿ ಹಲಸು, ನೇರಳೆ, ಹೊಳೆ ಮಾವು, ಕಿರಾಲು ಬೋಗಿ, ಪೈಸೆ, ಹೊಳೆಮತ್ತಿ ಹಾಗೂ ಕೂಳಿ ಜಾತಿಯ ಗಿಡಗಳನ್ನು ನೆಡಲಾಯಿತು ಎಂದು ತಿಳಿಸಿದರು.

ಕಾವೇರಿ ಪರಿಸರ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪ್ರತಿವರ್ಷ ನಡೆಯುವ ವನ ಮಹೋತ್ಸವಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ಗುಡ್ಡೆಹೊಸೂರು ಗ್ರಾ.ಪಂ. ಸದಸ್ಯ ಲಕ್ಷö್ಮಣ್, ಡಿ.ಆರ್.ಎಫ್.ಓ. ಕೆ.ಎನ್. ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ಗಸ್ತು ವನಪಾಲಕ ವಿ.ಎಸ್. ಮಂಜೇಗೌಡ, ಸಿದ್ದರಾಮ ನಾಟೀಕರ್, ದಿನೇಶ್, ಎನ್.ಎಸ್.ಎಸ್. ಹಾಗೂ ಇಕೋ ಕ್ಲಬ್ ಘಟಕದ ವಿದ್ಯಾರ್ಥಿಗಳು, ಅರಣ್ಯ ವೀಕ್ಷಕರು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಇದ್ದರು.