ಕೂಡಿಗೆ, ಜು. ೨೦: ಕೂಡಿಗೆಯ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರ ಪಾತ್ರ ಬಹುಮುಖ್ಯವಾಗಿರುತ್ತದೆ. ನೈಜ ಮಾನವೀಯ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೋಷಕರು ಮನವರಿಕೆ ಮಾಡಿದಾಗ ಕಾಲೇಜು ಹಂತದ ಶಿಕ್ಷಣದಲ್ಲಿ ಯಶಸ್ಸು ಕಾಣಲು ಅನುಕೂಲವಾಗುತ್ತದೆ ಎಂದರು.
ಸಭೆಯು ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಬಸಪ್ಪ ವಹಿಸಿ ಮಾತನಾಡಿ, ಪೋಷಕರು ಮಕ್ಕಳ ಜ್ಞಾನಾಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು. ಮಕ್ಕಳಿಗೆ ಓದುವಿಕೆಗೆ ಪೂರಕವಾದ ವಾತಾವರಣವನ್ನು ಒದಗಿಸಿಕೊಡಬೇಕೆಂದರು.
ಈ ಸಂದರ್ಭ ಹಿರಿಯ ಉಪನ್ಯಾಸಕರಾದ ನಾಗಪ್ಪ, ಕಾವೇರಮ್ಮ, ಸತೀಶ್, ರಮೇಶ್, ಹನುಮರಾಜ್, ಲಿನೇಟ್, ರವೀಶ್, ಸುಶೀತಂಗಚ್ಛನ್, ಪ್ರೇಕ್ಷಿತ, ಅನುಷಾ ಇದ್ದರು.