ಮಡಿಕೇರಿ, ಜು. ೨೧: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ವಿರೋಧಿಸಿ ತಾ. ೨೭ ರಂದು ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಆದರೆ ಈ ಬಗ್ಗೆ ಜಿಲ್ಲೆಯಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಂದ್ ತೀರ್ಮಾನದ ಪ್ರಸ್ತಾಪ ಕೇಳಿಬಂದಿದೆ. ಆದರೆ ಜಿಲ್ಲಾ ಸಂಘಕ್ಕೆ ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಈ ಹಿನ್ನೆಲೆ ಇದನ್ನು ಅವಲೋಕಿಸಿ ಸೋಮವಾರ ಅಥವಾ ಮಂಗಳವಾರ ತೀರ್ಮಾನ ಕೈಗೊಳ್ಳಲಿರುವುದಾಗಿ ಅವರು ‘ಶಕ್ತಿ’ಗೆ ತಿಳಿಸಿದ್ದಾರೆ.