ಕೂಡಿಗೆ, ಜು. ೨೧: ಜಿಲ್ಲೆಯ ೫ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲು ಆಯ್ಕೆ ಪ್ರಕ್ರಿಯೆಯು ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಯಾ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳಿಗೆ ವರ್ಗದವರು ಮೀಸಲಾತಿ ಪ್ರಕ್ರಿಯೆಯು ನಡೆದು ತಿಂಗಳುಗಳು ಕಳೆಯುತ್ತಾ ಬಂದಿದೆ. ಅದರ ಹಿನ್ನೆಲೆಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸ್ಪರ್ಧಿಸಿ, ಗೆಲುವು ಸಾಧಿಸಲು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜಕೀಯದ ಕಳೆ ಆರಂಭಗೊAಡಿದೆ.
ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಸಾಮಾನ್ಯ ವರ್ಗ ಪುರುಷರಿಗೆ ಅಧ್ಯಕ್ಷ ಸ್ಥಾನ ಬಂದಿರುವ ಕಡೆಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ಉಳಿದ ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಭೇಟಿ ಮಾಡಿ ಮತ ನೀಡುವಂತೆ ಮನವಿ ಮಾಡುವ ಚುನಾವಣಾ ಪ್ರಕ್ರಿಯೆಯು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳ ರಾಜಕೀಯ ಒಪ್ಪಂದಗಳ ನಡುವೆ ನಡೆಯುತ್ತಿರುವುದು ಕಂಡುಬರುತ್ತಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಚುನಾವಣೆಯ ಹಿನ್ನೆಲೆ ಅದಕ್ಕೆ ಸಂಬAಧಿಸಿದ ಚುನಾವಣಾ ಅಧಿಕಾರಿಗಳ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾಗಿದ್ದು, ಅವರುಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿರುತ್ತದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಮೀಸಲು ಸ್ಥಾನಕ್ಕಿಂತ ಸಾಮಾನ್ಯ ವರ್ಗಕ್ಕೆ ಬಂದಿರುವ ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ನಡುವೆ ಪೈಪೋಟಿ ನಡೆಸುವ ತಂತ್ರಗಾರಿಕೆಯ ರಾಜಕೀಯ ಈಗಾಗಲೇ ಗ್ರಾಮಾಂತರ ಮಟ್ಟದಲ್ಲಿ ಆರಂಭಗೊAಡಿದೆ.