ವೀರಾಜಪೇಟೆ, ಜು. ೨೧: ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಕ್ರಮವು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ತಾ. ೨೪ ರಂದು ಹಮ್ಮಿಕೊಳ್ಳಲಾಗಿದೆ.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಡಗು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಿಗಾಗಿ ನಿವೃತ್ತ ಶಿಕ್ಷಣ ಉಪ ನಿರ್ದೇಶಕ ಪೆರಿಗ್ರೀನ್ ಮಚ್ಚಾಡೋ ಭಾಗವಹಿಸಲಿದ್ದಾರೆ. ೨೦೨೨-೨೩ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶೇ. ೧೦೦ ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ, ವಿಷಯ ಬೋಧನಾ ಶಿಕ್ಷಕರಿಗೆ, ದೈಹಿಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.