ಮಡಿಕೇರಿ, ಜು. ೨೦: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ರೈಲ್ವೆ ಬುಕ್ಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರ ಕ್ಷಣಾ ವೇದಿಕೆಯ ಸದಸ್ಯರು ಜಿಲ್ಲಾಧಿ ಕಾರಿ ಹಾಗೂ ಜಿಲ್ಲಾ ಅಂಚೆ ಅಧೀಕ್ಷ ಕರ ಕಚೇರಿಗೆ ಮನವಿಪತ್ರ ಸಲ್ಲಿಸಿದರು.

ವೇದಿಕೆ ಅಧ್ಯಕ್ಷ ರವಿ ಗೌಡ ಮಾತ ನಾಡಿ, ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದ ನಗರಸಭಾ ಮಳಿಗೆ ಯೊಂದರಲ್ಲಿ ಹಲವು ವರ್ಷಗಳ ಹಿಂದೆ ರೈಲ್ವೆ ಬುಕ್ಕಿಂಗ್ ಸೆಂಟರ್‌ಅನ್ನು ತೆರೆಯಲಾಗಿತ್ತು. ಬಳಿಕ ಮುಚ್ಚಲ್ಪಟ್ಟ ನೈರುತ್ಯ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೆಂಟರ್ ಇದುವರೆಗೂ ಕಾರ್ಯಾರಂಭ ಮಾಡಿಲ್ಲ. ಕೇಂದ್ರದಿAದ ಸಾಮಾನ್ಯ ಜನರಿಗೆ ಸಹಕಾರಿಯಾಗುತ್ತದೆ ಎಂದರು.

ಈ ಸಂದರ್ಭ ಪ್ರಧಾನ ಕಾರ್ಯ ದರ್ಶಿ ಮೀನಾಜ್ ಪ್ರವೀಣ್, ಮಡಿ ಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಪ್ರಸಾದ್, ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕಿ ಲಿಲ್ಲಿಗೌಡ ಹಾಗೂ ವೇದಿಕೆ ಸದಸ್ಯರು ಹಾಜರಿದ್ದರು.