ವಿಪಕ್ಷಗಳಿಂದ ಕಲಾಪ ಬಹಿಷ್ಕಾರ

ಬೆಂಗಳೂರು, ಜು. ೨೧: ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. ಈ ವೇಳೆ ೧೦ ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಕೊನೆಯ ದಿನದಂದು ಕಲಾಪ ಬಹಿಷ್ಕರಿಸಿ ವಿಧಾನಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಅವರಿಗೆ ಜೆಡಿಎಸ್ ಶಾಸಕರು ಕೂಡ ಸಾಥ್ ನೀಡಿದರು. ಈ ವೇಳೆ ಪರಿಷತ್ತಿನಲ್ಲಿಂದು ಮಾತನಾಡಿದ ಸಿಎಂ ಸಿದ್ದ ರಾಮಯ್ಯ, ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ ಮುಂದೆ ಧರಣಿ ಮಾಡ ಬೇಕಿತ್ತು. ಗಾಂಧಿ ಕೊಂದವರ ವಂಶದವರು ಅವರ ಪ್ರತಿಮೆ ಮುಂದೆ ಧರಣಿ ಮಾಡುತ್ತಿರುವುದು ವಿಪರ್ಯಾಸವೇ ಸರಿ, ಅವರು ನ್ಯಾಯ ಯುತವಾಗಿ ನಾಥೂರಾಮ್ ಗೋಡ್ಸೆ ಪ್ರತಿಮೆ ಮುಂದೆ ಕುಳಿತುಕೊಳ್ಳಬೇಕು ಎಂದು ಟೀಕಿಸಿದರು.

ರಾಹುಲ್ ವಿರುದ್ಧದ ಮಾನನಷ್ಟ ಪ್ರಕರಣ-ವಿಚಾರಣೆ ಕೈಗೆತ್ತುಕೊಂಡ ಸುಪ್ರೀಂ

ನವದೆಹಲಿ, ಜು. ೨೧: ‘ಮೋದಿ ಉಪನಾಮ’ ಟೀಕೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತ್ತುಕೊಂಡಿದೆ. ಮಾನನಷ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಗುಜರಾತ್‌ನ ಸೂರತ್ ಮ್ಯಾಜಿಸ್ಟೆçÃಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ.ರಾಹುಲ್ ಗಾಂಧಿ ಮನವಿ ಮೇರೆಗೆ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೇರಿ ಇತರರಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ ೪ಕ್ಕೆ ಮುಂದೂಡಿದೆ.

ಲೋಕಸಭೆ : ಮಣಿಪುರ ಪರಿಸ್ಥಿತಿ ಕುರಿತು ವಿಪಕ್ಷಗಳಿಂದ ಆಕ್ರೋಶ

ನವದೆಹಲಿ, ಜು. ೨೧: ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಬುಡಕಟ್ಟು ಮಹಿಳೆಯರ ಅರೆಬೆತ್ತಲೆ ಮೆರವಣಿಗೆಯ ವೀಡಿಯೋ ವೈರಲ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಇಂದು ಕೂಡಾ ಗದ್ದಲ, ಕೋಲಾಹಲ ಮುಂದುವರೆಸಿದ್ದರಿAದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಪ್ರತಿಪಕ್ಷಗಳ ಸದಸ್ಯರು ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಆರಂಭಿಸಿದವು. ಘೋಷಣೆ ಕೂಗುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ದೊರೆಯಲ್ಲ, ಆದರೆ ಮಾತುಕತೆ ಮತ್ತು ಚರ್ಚೆ ಮೂಲಕ ಬಗೆಹರಿಸಬಹುದು ಎಂದು ಪ್ರತಿಭಟನಾನಿರತ ಸದಸ್ಯರಿಗೆ ಸ್ಪೀಕರ್ ಹೇಳಿದರು.

ಎನ್.ಐ.ಎ.ಯಿಂದ ಶಂಕಿತ ಉಗ್ರರ ವಿಚಾರಣೆ

ಬೆಂಗಳೂರು, ಜು. ೨೧: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪೊಲೀಸ್ ವಶದಲ್ಲಿರುವ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫಾಜಿಲ್‌ರನ್ನು ಎನ್‌ಐಎ ತಂಡ ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಆದೇಶ

ವಾರಣಾಸಿ, ಜು. ೨೧: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಜ್ಞಾನವ್ಯಾಪಿ ದೇಗುಲ ಪ್ರಕರಣಕ್ಕೆ ಸಂಬAಧಿಸಿದAತೆ ವಾರಣಾಸಿ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಜ್ಞಾನವ್ಯಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಆದೇಶ ನೀಡಿದೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವ್ಯಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಶುಕ್ರವಾರ ಅನುಮತಿ ನೀಡಿದ್ದು, ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ ೪ ರೊಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.