ಮುಳ್ಳೂರು, ಜು. ೨೧: ಸಮೀಪದ ಆಲೂರು-ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಸ್ವಂತವಾಗಿ ನಿರ್ಮಿಸಿರುವ ರೋಟರಿ ಭವನ ನೂತನ ಕಟ್ಟಡದ ಉದ್ಘಾಟನೆ ಹಾಗೂ ರೋಟರಿ ಮಲ್ಲೇಶ್ವರ ಸಂಸ್ಥೆಯ ೨೦೨೩-೨೪ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ. ೨೩ ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ರೋಟರಿ ಭವನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ತಾ. ೨೩ ರಂದು ಮಧ್ಯಾಹ್ನ ೨ ಗಂಟೆಗೆ ನಡೆಯಲಿದ್ದು, ರೋಟರಿ ಭವನವನ್ನು ಮಡಿಕೇರಿ ಶಾಸಕ ಡಾ. ಮಂಥರಗೌಡ ಉದ್ಘಾಟಿಸಲಿದ್ದಾರೆ. ರೋಟರಿ ಮಲ್ಲೇಶ್ವರ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹೆಚ್.ಇ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರೋಟರಿ ಕ್ಲಬ್ ಜಿಲ್ಲಾ ಸಹಾಯಕ ರಾಜ್ಯಪಾಲ ಎಂ.ಡಿ. ಲಿಖಿತ್, ಪೂರ್ವ ಜಿಲ್ಲಾ ರಾಜ್ಯಪಾಲ ಎಂ. ರಂಗನಾಥ್ ಭಟ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.
ಸಂಜೆ ೬ ಗಂಟೆಗೆ ರೋಟರಿ ಮಲ್ಲೇಶ್ವರ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರೋಟರಿ ಭವನದಲ್ಲಿ ನಡೆಯಲಿದ್ದು, ಸಮಾರಂಭದಲ್ಲಿ ರೋಟರಿ ಕ್ಲಬ್ ಪೂರ್ವ ಜಿಲ್ಲಾ ರಾಜ್ಯಪಾಲ ಎಂ. ರಂಗನಾಥ್, ಸಹಾಯಕ ರಾಜ್ಯಪಾಲ ಎಂ.ಡಿ. ಲಿಖಿತ್, ವಲಯ ಸೇನಾನಿ ಹೆಚ್.ಎಂ. ದಿವಾಕರ್ ಮುಂತಾದವರು ಭಾಗವಹಿಸುತ್ತಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.