ನಾಪೋಕ್ಲು, ಜು. ೨೧: ಸಮೀಪದ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಗಾಳಿ-ಮಳೆಗೆ ಗ್ರಾಮದ ನಿವಾಸಿ ನಸೀಮ ಎಂಬವರು ವಾಸವಾಗಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ಹೋಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಕಂದಾಯ ಪರಿವೀಕ್ಷಕ ರವಿಕುಮಾರ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ.