ಸಿದ್ದಾಪುರ, ಜು. ೨೩: ಕಾವೇರಿ ನದಿಯಲ್ಲಿ ನೀರಿನಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೆಲ್ಲಿಹುದಿಕೇರಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ನದಿ ತಟದ ನಿವಾಸಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು. ಈ ಸಂಧರ್ಭದಲ್ಲಿ ಕಂದಾಯ ಪರಿವೀಕ್ಷಕ ಪ್ರಶಾಂತ್, ಗ್ರಾಮ ಆಡಳಿತಾಧಿಕಾರಿ ಸಚಿನ್ ಕುಲಕರ್ಣಿ, ಗ್ರಾ.ಪಂ ಸದಸ್ಯ ಹನೀಫ ಹಾಜರಿದ್ದರು.