ಮಡಿಕೇರಿ, ಜು. ೨೩: ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಒದಗಿಸುವ ಸಂಬAಧ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಭರವಸೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮ ಸಂಸ್ಥೆಗಳನ್ನು ಮುನ್ನಡೆಸುವುದು ಸವಾಲಿನ ಕೆಲಸ. ಸಂಸ್ಥೆಗಳು ಆರ್ಥಿಕ ಸಂಕಷ್ಟದ ನಡುವೆ ಕೆಲಸ ಮಾಡುತ್ತಿವೆ. ಜಿಲ್ಲಾ ಮಟ್ಟದಲ್ಲಿಯೂ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ಆದರೂ ಪತ್ರಕರ್ತರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆಸಕ್ತಿ, ಜನಪರ ಕಾಳಜಿ ಇದ್ದರೆ ಮಾತ್ರ ಪತ್ರಕರ್ತನಾಗಲು ಸಾಧ್ಯ. ತಾನು ಮುಖ್ಯಮಂತ್ರಿಗಳೊAದಿಗೆ ನಿಕಟ ಸಂಪರ್ಕದಲ್ಲಿರಬಹುದು. ಆದರೆ, ತನಗೆ ಕ್ಷೇತ್ರದ ಜನರು ಮುಖ್ಯ. ಈ ಹಿನ್ನೆಲೆ ಕ್ಷೇತ್ರದಲ್ಲಿ ಹೆಚ್ಚಾಗಿ ಇರುತ್ತೇನೆ. ಸಂಘಟಿತರಾಗಿ ಕೆಲಸ ಮಾಡಿದರೆ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿ, ಪತ್ರಕರ್ತ ವೃತ್ತಿ ಶೋಕಿ ಅಲ್ಲ. ಸಾಮಾಜಿಕ ಬದ್ಧತೆ ಇರಬೇಕು. ವೃತ್ತಿಗೆ ನ್ಯಾಯ ಕೊಡುವುದರೊಂದಿಗೆ ಸಮಾಜಕ್ಕೆ ಬೆಳಕಾಗಿ ನೊಂದವರಿಗೆ ಧನಿಯಾಗಬೇಕು ಎಂದು ಕರೆ ನೀಡಿದ ಅವರು, ವೃತ್ತಿಯನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸುದ್ದಿಗಳು ಇಂದು ಸುಲಭವಾಗಿ ದೊರೆಯುತ್ತವೆ. ಆದರೆ, ನೈಜಾಂಶ ಪರಿಶೀಲಿಸಿ ವರದಿ ಮಾಡಬೇಕಾದ ಸವಾಲಿದೆ. ಸುದ್ದಿಯನ್ನು ಹೆಕ್ಕಿ ತೆಗೆಯುವ ಜಾಣ್ಮೆ ಹಾಗೂ ತಾಳ್ಮೆ ಪತ್ರಕರ್ತರಿಗೆ ಇರಬೇಕು ಎಂದ ಸಲಹೆ ನೀಡಿದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪತ್ರಿಕಾ ಕ್ಷೇತ್ರ ಪ್ರಮುಖ ಅಂಗ. ಪತ್ರಕರ್ತರು ಸಮಾಜದ ಕನ್ನಡಿ. ಜಿಲ್ಲೆಯ ಸಮಸ್ಯೆಯ ಬಗ್ಗೆ ಪತ್ರಕರ್ತರು ವರದಿ ಮೂಲಕ ಸರಕಾರವನ್ನು ಎಚ್ಚರಿಸ ಬೇಕೆಂದು ಹೇಳಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಕರ್ತರು ಸಂಕಷ್ಟದಲ್ಲಿ, ಸವಾಲಿನ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ನಡುವೆ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ನಿವೇಶನ ದೊರಕಬೇಕು. ಶಾಸಕರು ಈ ಬೇಡಿಕೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಪತ್ರಕರ್ತರು ವಿಶೇಷ ವರದಿಗಳ ಮೂಲಕ ಗಮನ ಸೆಳೆಯುವ ಕೆಲಸ ಮಾಡಬೇಕು. ಪ್ರಶಸ್ತಿಗಳಿಂದ ಗೌರವ ಹೆಚ್ಚಾಗುವುದರ ಜೊತೆಗೆ ವೃತ್ತಿಯಲ್ಲಿ ಪ್ರವರ್ಧಮಾನಕ್ಕೆ ಬರಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಷ್ಟಿçÃಯ ಸಮಿತಿ ಸದಸ್ಯ ಸುನಿಲ್ ಪೊನ್ನೇಟ್ಟಿ, ರಾಜ್ಯ ಸಮಿತಿ ಸದಸ್ಯ ಟಿ.ಎನ್. ಮಂಜುನಾಥ್ ಇದ್ದರು. ಚನ್ನನಾಯಕ್ ಪ್ರಾರ್ಥಿಸಿ, ಆನಂದ್ ಕೊಡಗು, ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿ, ಅನುಕಾರ್ಯಪ್ಪ ಸ್ವಾಗತಿಸಿ, ವಾಸು ಆಚಾರ್ಯ ವಂದಿಸಿದರು.
ಪ್ರಶಸ್ತಿ ಪ್ರದಾನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ನೀಡಲಾಗುವ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಪಾರ್ಥ ಚಿಣ್ಣಪ್ಪ, ಕ್ರೀಡಾ ವರದಿ ಪ್ರಶಸ್ತಿಯನ್ನು ಕಾಯಪಂಡ ಶಶಿ ಸೋಮಯ್ಯ, ಕೃಷಿ ವರದಿ ಪ್ರಶಸ್ತಿಯನ್ನು ಹೆಚ್.ಕೆ.ಜಗದೀಶ್, ತನಿಖಾ ವರದಿ ಪ್ರಶಸ್ತಿಯನ್ನು ಕುಯ್ಯಮುಡಿ ಸುನಿಲ್, ಆರೋಗ್ಯ ವರದಿ ಪ್ರಶಸ್ತಿಯನ್ನು ಆನಂದ್ ಕೊಡಗು ಪಡೆದುಕೊಂಡರು.
ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಕೆ.ಬಿ.ದಿವಾಕರ್, ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಹಿರಿಕರ ರವಿ, ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಅಜ್ಜಮಾಡ ರಮೇಶ್ ಕುಟ್ಟಪ್ಪ, ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ರವಿ ಎಸ್, ತೋಟಗಾರಿಕಾ ವರದಿ ಪ್ರಶಸ್ತಿಯನ್ನು ಆದರ್ಶ್ ಅದ್ಕಲೇಗಾರ್, ಮಾನವೀಯ ವರದಿ ಪ್ರಶಸ್ತಿಯನ್ನು ದಿನೇಶ್ ಮಾಲಂಬಿ, ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ಮಲ್ಲಿಕಾರ್ಜುನ, ಸೇನೆಗೆ ಸಂಬAಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ಬಾಚರಣಿಯಂಡ ಅನುಕಾರ್ಯಪ್ಪ, ವಿಶ್ವ ಕುಂಬೂರು, ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಕಿಶೋರ್ ರೈ ಕತ್ತಲೆಕಾಡು ಪಡೆದುಕೊಂಡರು.
ಇದರೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ ಅತ್ಯುತ್ತಮ ವರದಿಗೆ ಪ್ರಶಸ್ತಿ ಪಡೆದ ಜಗದೀಶ್ ಜೋಡುಬೀಟಿ, ಪುತ್ತರೀರ ಕರುಣ್ ಕಾಳಯ್ಯ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿAದ ಪ್ರಶಸ್ತಿಗೆ ಭಾಜನರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ ಪ್ರಶಸ್ತಿ ಪಡೆದ ಉಳ್ಳಿಯಡ ಎಂ. ಪೂವಯ್ಯ ಅವರನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಸನ್ಮಾನಿಸಲಾಯಿತು.
ಸಂಘದ ವಾರ್ಷಿಕ ಮಹಾಸಭೆ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಿತು.
ಖಜಾಂಜಿ ಆನಂದ್ ಕೊಡಗು ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ವಾರ್ಷಿಕ ವರದಿ ವಾಚಿಸಿದರು.