ಮಡಿಕೇರಿ, ಜು. ೨೩: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೬ ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ೧ ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಭರ್ತಿ ಮಾಡಿ ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಆಗಸ್ಟ್ ೧೫ ರ ಸಂಜೆ ೫ ಗಂಟೆಯೊಳಗೆ ಕಚೇರಿಗೆ ಸಲ್ಲಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ.ಜತಿಜsಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಪರಿಶೀಲಿಸಬಹುದು ಹಾಗೂ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.