ಭಾಗಮಂಡಲ, ಜು. ೨೨: ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿದ್ದು ಶನಿವಾರ ಎಡೆಬಿಡದೆ ಮಳೆ ಸುರಿಯಿತು. ಬಿರುಸಿನ ಮಳೆಯಿಂದಾಗಿ ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಾಗಿದೆ. ತ್ರಿವೇಣಿ ಸಂಗಮ ದಲ್ಲಿಯೂ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆಟಿ ಮಾಸದ ಹಿನ್ನೆಲೆಯಲ್ಲಿ ಭಾಗಮಂಡಲ ತಲಕಾವೇರಿ ಕ್ಷೇತ್ರಗಳಿಗೆ ಭೇಟಿ ನೀಡುವ ಸ್ಥಳೀಯ ಭಕ್ತರ ಸಂಖ್ಯೆ ಕಡಿಮೆ ಇತ್ತು. ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹೊರಭಾಗದಿಂದಲೂ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಇಳಿಮುಖಗೊಂಡಿದೆ. -ಸುನಿಲ್