ಸಿದ್ದಾಪುರ, ಜು. ೨೨: ಪಟ್ಟಣದ ಸೇವಾ ಸಿಂಧು, ಗ್ರಾಮ ಒನ್ ಕೇಂದ್ರಗಳಿಗೆ ವೀರಾಜಪೇಟೆ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಸರಕಾರವು ನೀಡುತ್ತಿರುವ ಹಲವಾರು ಯೋಜನೆಗಳು ಸೇರಿದಂತೆ ಅನೇಕ ಅರ್ಜಿ ಸೇವಾ ಸಿಂಧು ಕೇಂದ್ರಗಳಲ್ಲಿ ಲಭ್ಯವಿರುವ ಹಿನ್ನೆಲೆಯಲ್ಲಿ ಕೇಂದ್ರದ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ತಹಶೀಲ್ದಾರ್ ರಾಮಚಂದ್ರ ಮಾತನಾಡಿ, ಸರಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು ಸರಕಾರ ನಿಗದಿಪಡಿಸಿದ ಶುಲ್ಕ ಮಾತ್ರ ಪಡೆಯಬೇಕೆಂದರು. ಅಲ್ಲದೆ ಗೃಹಲಕ್ಷಿö್ಮ ಯೋಜನೆಗೆ ಅರ್ಜಿ ಸಲ್ಲಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಸಾರ್ವಜನಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿದಾರರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಒದಗಿಸಬೇಕು ಹಾಗೂ ಜನದಟ್ಟಣೆಯನ್ನು ನಿಯಂತ್ರಿಸಬೇಕೆAದರು.
ಈ ಸಂದರ್ಭ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತಾಧಿಕಾರಿ ಓಮಪ್ಪ ಬಣಾಕಾರ್ ಹಾಜರಿದ್ದರು.