*ಗೋಣಿಕೊಪ್ಪ, ಜು. ೨೨: ಕ್ಷಯರೋಗ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಯಿತು.

ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ‘ಕ್ಷಯ ಮುಕ್ತ ಗ್ರಾಮ ಪಂಚಾಯಿತಿ’ ಅಭಿಯಾನದ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಜೊತೆಗೆ ನಿಕ್ಷಯ್ ಮಿತ್ರದ ಬಗ್ಗೆ ಮಾಹಿತಿ ನೀಡಿದರು.

ಸಿಬ್ಬಂದಿಗಳಾದ ಶಶಿಕಾಂತ್, ಪ್ರೇಮ್ ಕುಮಾರ್, ಶ್ರೀಧರ್, ವಿನಿಲ್, ಪ್ರದೀಪ್ ಇದ್ದರು.