ಪೊನ್ನಂಪೇಟೆ, ಜು. ೨೨: ಪೊನ್ನಂಪೇಟೆ ತಾಲೂಕಿನ ಬಲ್ಯಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ಚಿ ಗ್ರಾಮದ ನಿವಾಸಿ ಮಾಚಿಮಾಡ ಡಿ.ಮಾಚಯ್ಯ ಎಂಬವರ ಮನೆ ಮೇಲೆ ನಡೆದ ಗುಂಡಿನ ದಾಳಿಗೆ ಸಂಬAಧಿಸಿದAತೆ ಕುಟ್ಟ ವೃತ್ತ ನಿರೀಕ್ಷಕ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ, ಶ್ರೀಮಂಗಲ ಠಾಣಾಧಿಕಾರಿ ಶಿವಾನಂದ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಗುಂಡಿನ ದಾಳಿ ನಡೆದ ಮನೆಯ ಸಮೀಪದ ಸಿಸಿ ಟಿವಿ ದೃಶ್ಯಾವಳಿ, ಮೊಬೈಲ್ ಲೊಕೇಶನ್ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ನಡೆದ ಮನೆಯವರಿಗೆ ಈ ಮೊದಲು ಯಾರ ಮೇಲಾದರೂ ದ್ವೇಷ ಇತ್ತೇ ಎಂಬುದರ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಘಟನೆಗೆ ಸಂಬAಧಿಸಿದAತೆ ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ.