ಮಡಿಕೇರಿ, ಜು. ೨೨: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು ೧೪ ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ‍್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆ ೧ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆಗಸ್ಟ್ ೫ ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ. ೫೮, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ಬೆಂಗಳೂರು-೫೬೦೦೨೫ ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.