ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ೮ ಮಂದಿ ಸಾವು

ನೆಲ್ಲೂರು (ಆಂಧ್ರಪ್ರದೇಶ), ಜು. ೨೩: ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ೮ ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ. ಆರೋಪ ಸಂಬAಧ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಅಧಿಕಾರಿಗಳು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಆಕ್ಸಿಜನ್ ಕೊರತೆಯಿಂದ ಯಾವುದೇ ರೋಗಿಗಳೂ ಸಾವನ್ನಪ್ಪಿಲ್ಲ. ಕಾಯಿಲೆಗಳಿಂದಲೇ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. ೮ ಮಂದಿ ರೋಗಿಗಳ ಪೈಕಿ ೬ ಮಂದಿ ತೀವ್ರ ನಿಗಾ ಘಟಕ (ಎಂಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪರಿಸ್ಥಿತಿ ಕೈಮೀರುವ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು, ಕೂಲಂಕುಷ ತನಿಖೆ ನಡೆಸಿದರು. ಇದರಂತೆ ತನಿಖೆಯ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ವರದಿಯಲ್ಲಿ ಸಾವಿಗೂ, ಆಕ್ಸಿಜನ್ ಕೊರತೆಗೂ ಸಂಬAಧವಿಲ್ಲ. ವೈದ್ಯಕೀಯ ಕಾರಣಗಳಿಂದಾಗಿಯೇ ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಸ್ವಾತಂತ್ರ‍್ಯ ಹೋರಾಟಗಾರನ ವೃದ್ಧ ಪತ್ನಿ ಸಜೀವ ದಹನ

ಇಂಫಾಲ, ಜು. ೨೩: ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಭೀಕರ ಘಟನೆಗಳ ಸರಮಾಲೆ ಒಂದೊAದಾಗಿ ನಿಧಾನವಾಗಿ ಬಯಲಾಗುತ್ತಿದ್ದು, ಇದೀಗ ಹಿಂಸಾಚಾರದಲ್ಲಿ ಸ್ವಾತಂತ್ರ‍್ಯ ಹೋರಾಟಗಾರನ ವೃದ್ಧ ಪತ್ನಿಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ. ಗುಂಪೊAದು ಸ್ವಾತಂತ್ರ‍್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಇದೀಗ ಬಹಿರಂಗವಾಗಿದ್ದು, ಈ ಬಗ್ಗೆ ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ರಾಜಧಾನಿ ಇಂಫಾಲ್‌ನಿAದ ಸುಮಾರು ೪೫ ಕಿಮೀ ದೂರದಲ್ಲಿರುವ ಸೆರೌ ಗ್ರಾಮದಲ್ಲಿ ಮೇ ೨೮ ರಂದು ಈ ಘಟನೆ ನಡೆದಿದ್ದು, ಸುಮಾರು ೮೦ ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿ ಆನಂತರ ಇಡೀ ಮನೆಗೆ ಬೆಂಕಿ ಹಚ್ಚಿದ್ದಾರೆ. ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಮನೆಯನ್ನು ಆವರಿಸಿದ್ದು, ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಕುಟುಂಬದವರು ಹೇಳಿದ್ದಾರೆ. ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ‍್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟçಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಹೇಳಲಾಗಿದೆ. ಘಟನೆ ಸಂಬAಧ ಪ್ರತಿಕ್ರಿಯೆ ನೀಡಿರುವ ವೃದ್ದೆಯ ಮೊಮ್ಮಗ ೨೨ ವರ್ಷದ ಪ್ರೇಮಕಾಂತ ಅವರು ದುಷ್ಕರ್ಮಿಗಳು ಅಜ್ಜಿ ಮನೆಗೆ ಬೆಂಕಿ ಹಚ್ಚಿದಾಗ ನಾವು ಅವರನ್ನು ರಕ್ಷಿಸಲು ಮುಂದಾದೆವು. ಆದರೆ ದುಷ್ಕರ್ಮಿಗಳು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಕೂದಲೆಳೆ ಅಂತರದಲ್ಲಿ ನಾವು ಪ್ರಾಣಾಪಾಯದಿಂದ ಪಾರಾದೆವು. ಈ ವೇಳೆ ನನ್ನ ತೋಳು ಮತ್ತು ತೊಡೆಗೆ ಗುಂಡಿನ ಗಾಯವಾಗಿತ್ತು. ಹೀಗಾಗಿ ಅಜ್ಜಿ ಒಳಗಿನಿಂದಲೇ ಮೊದಲು ಇಲ್ಲಿಂದ ಹೋಗು. ಆ ಮೇಲೆ ಬಾ ಎಂದು ಹೇಳಿದ್ದರು. ಆದರೆ ಅಷ್ಟು ಹೊತ್ತಿಗಾಗಲೇ ನನ್ನ ಅಜ್ಜಿ ಸಜೀವ ದಹನವಾಗಿದ್ದರು ಎಂದು ಅಳಲು ತೋಡಿಕೊಂಡಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ, ಗುರುದ್ವಾರದ ಮುಖ್ಯಸ್ಥ ಬಂಧನ

ಹೋಶಿಯಾರ್‌ಪುರ, ಜು. ೨೩: ೧೩ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಂಜಾಬ್‌ನ ಹೋಶಿಯಾರ್‌ಪುರದ ಗ್ರಾಮದಲ್ಲಿರುವ ಗುರುದ್ವಾರದ ಮುಖ್ಯಸ್ಥನನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ ೨೦ ರಂದು ಬಾಲಕಿ ಹೋಶಿಯಾರ್‌ಪುರದ ಚಬ್ಬೇವಾಲ್ ಪ್ರದೇಶದ ತನ್ನ ಹಳ್ಳಿಯಲ್ಲಿರುವ ಗುರುದ್ವಾರಕ್ಕೆ ಹೋದಾಗ ಈ ಘಟನೆ ನಡೆದಿತ್ತು ಎಂದು ಗಢಶಂಕರ್ ಉಪ ಪೊಲೀಸ್ ವರಿಷ್ಠಾಧಿಕಾರಿ ಬಾಲ್ಕರ್ ಸಿಂಗ್ ಹೇಳಿದ್ದಾರೆ. ಗುರುದ್ವಾರ ಮುಖ್ಯಸ್ಥ ಸಕತಾರ್ ಸಿಂಗ್ (೬೫) ಬಾಲಕಿಯನ್ನು ತನ್ನ ಕೋಣೆಗೆ ಕರೆಸಿಕೊಂಡು,ಲೈAಗಿಕ ಕಿರುಕುಳ ನೀಡಿದ್ದ. ಘಟನೆಯನ್ನು ಬಾಲಕಿ ತನ್ನ ಪೋಷಕರಿಗೆ ವಿವರಿಸಿದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು ಎಂದು ಡಿಎಸ್ ಪಿ ತಿಳಿಸಿದ್ದಾರೆ. ಸಕತಾರ್ ಸಿಂಗ್ ಅವರನ್ನು ಭಾರತೀಯ ದಂಡ ಸಂಹಿತೆಯ ಸಂಬAಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳ ಮೂಲಕ ಭಾರತದೊಳಗೆ ನುಸುಳಿದ ಚೀನಿ ಪ್ರಜೆಗಳ ಬಂಧನ

ಚAಪಾರಣ್, ಜು. ೨೩: ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ನೇಪಾಳದ ಮೂಲಕ ಭಾರತದ ಭೂಪ್ರದೇಶಕ್ಕೆ ನುಸುಳಿರುವುದನ್ನು ಗಮನಿಸಿದ ವಲಸೆ ಅಧಿಕಾರಿಗಳು ಬಿಹಾರದಲ್ಲಿ ಇಬ್ಬರು ಚೀನೀ ಪ್ರಜೆಗಳನ್ನು ಬಂಧಿಸಿದ್ದಾರೆ. ಪೂರ್ವ ಚಂಪಾರಣ್ ಜಿಲ್ಲೆಯ ರಕ್ಸಾಲ್ ಗಡಿ ಹೊರಠಾಣೆಯಲ್ಲಿ ಶನಿವಾರ ರಾತ್ರಿ ಅವರನ್ನು ಬಂಧಿಸಲಾಯಿತು ಎಂದು ಸಹಾಯಕ ವಿದೇಶಿ ಪ್ರಾದೇಶಿಕ ನೋಂದಣಿ ಅಧಿಕಾರಿ ಎಸ್‌ಕೆ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ವಿದೇಶಿಗರು ತಮ್ಮ ಹೆಸರು ಝಾವೋ ಜಿಂಗ್ ಮತ್ತು ಫೂ ಕಾಂಗ್ ಎಂದು ಹೇಳಿದ್ದು, ಅವರಿಬ್ಬರೂ ಚೀನಾದ ಜಾಕ್ಸಿಂಗ್ ಪ್ರಾಂತ್ಯದಿAದ ಬಂದವರಾಗಿದ್ದಾರೆ. ಅವರ ಬಳಿ ಯಾವುದೇ ಮಾನ್ಯವಾದ ಪ್ರಯಾಣ ದಾಖಲೆಗಳು ಇರಲಿಲ್ಲ. ಹಿಂದಿನ ರಾತ್ರಿ ಅವರು ತಂಗಿದ್ದ ಹೊಟೇಲ್‌ನಲ್ಲಿ ತಮ್ಮ ಪಾಸ್‌ಪೋರ್ಟ್ಗಳನ್ನು ಬಿಟ್ಟು ಬಂದಿರುವುದಾಗಿ ಹೇಳಿರುವುದಾಗಿ ಸಿಂಗ್ ಹೇಳಿದರು. ದಾಖಲೆಗಳ ಪ್ರಕಾರ ಜುಲೈ ೨ ರಂದು ಸಹ ಈ ಚೀನಾ ಪ್ರಜೆಗಳು ಭಾರತೀಯ ಭೂ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದರು. ಆದರೆ, ಪ್ರವೇಶ ನಿರಾಕರಿಸಿ ಹಿಂದೆ ಕಳುಹಿಸಲಾಗಿತ್ತು. ಆದಾಗ್ಯೂ, "ಅವರು ಪದೇ ಪದೇ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವುದು ಅನುಮಾನಗಳನ್ನು ಹುಟ್ಟುಹಾಕುತ್ತದೆ. ಆದ್ದರಿಂದ ಹೆಚ್ಚಿನ ತನಿಖೆ ಮತ್ತು ಕ್ರಮಕ್ಕಾಗಿ ಅವರನ್ನು ಬಂಧಿಸಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನ ರಕ್ಷಣೆ

ಪಟ್ನಾ, ಜು. ೨೩: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ ೫ ಗಂಟೆಗಳ ಕಾಲ ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ ಮೂಲಕ ಬಾಲಕನನ್ನು ರಕ್ಷಿಸಲಾಗಿದೆ. ಬಾಲಕ ಆರೋಗ್ಯವಾಗಿದ್ದು, ಕೊಳವೆ ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನಳಂದ ಎನ್‌ಡಿಆರ್‌ಎಫ್ ಅಧಿಕಾರಿ ರಂಜೀತ್ ಕುಮಾರ್ ತಿಳಿಸಿದ್ದಾರೆ. ರೈತರೊಬ್ಬರಿಗೆ ಸೇರಿದ ಕೊಳವೆ ಬಾವಿ ಮುಚ್ಚದ ಕಾರಣ ಶಿವಂ ಕುಮಾರ್ ಎಂಬ ಮಗು ಅದರೊಳಗೆ ಬಿದ್ದಿತ್ತು. ಆದರೊಂದಿಗೆ ಜೊತೆಗೆ ಆಟವಾಡುತ್ತಿದ್ದ ಮಕ್ಕಳು ಮಗುವಿನ ಪೋಷಕರಿಗೆ ಮಾಹಿತಿ ನೀಡಿದ್ದರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಮಗುವಿಗೆ ಆಮ್ಲಜನಕ ಪೂರೈಸುವ ಮೂಲಕ ಸುರಕ್ಷಿತವಾಗಿ ಮೇಲಕ್ಕೆಲಾಗಿದೆ. ತಕ್ಷಣವೇ ಅಲ್ಲಿಯೇ ಇದ್ದ ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು.