ಮಡಿಕೇರಿ, ಜು. ೨೩: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ೧೯೬೧ ಹಾಗೂ ನಿಯಮಾವಳಿ ೧೯೬೩ ರ ಕಲಂ. ೪(೧) ಮತ್ತು (೩) ಹಾಗೂ ನಿಯಮ ೩ ರ ಮೇರೆಗೆ ಮಡಿಕೇರಿ ತಾಲೂಕಿನಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದು ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎA. ಯತ್ನಟ್ಟಿ ತಿಳಿಸಿದ್ದಾರೆ.
ಈಗಾಗಲೇ ತಮ್ಮ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಮಡಿಕೇರಿಯಲ್ಲಿ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ನೋಂದಣಿಯಾಗದಿರುವ ಸಂಸ್ಥೆಗಳು ೧೫ ದಿನಗಳೊಳಗೆ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾAಶದಲ್ಲಿ hಣಣಠಿ://ತಿತಿತಿ.eಞಚಿಡಿmiಞಚಿ.ಏಚಿಡಿಟಿಚಿಣಚಿಞಚಿ.gov.iಟಿ/eಞಚಿಡಿmiಞಚಿ/sಣಚಿಣiಛಿ/home.ಚಿsಠಿx ನಿಗದಿತ ಆನ್ಲೈನ್ ಮೂಲಕ ಶುಲ್ಕ ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆಯುವಂತೆ ಮಾಡಿಸಿಕೊಳ್ಳಬೇಕೆಂದು ಮಡಿಕೇರಿ ತಾಲೂಕಿನ ಉದ್ದಿಮೆದಾರರಿಗೆ ತಿಳುವಳಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.