ಮಡಿಕೇರಿ, ಜು. ೨೩: ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ಅವರು ಕಾವೇರಿ ನದಿ ಪಾತ್ರದ ಹತ್ತಿರ ಇರುವ ಕರಡಿಗೋಡು ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ವ್ಯಾಪಕ ಮಳೆಯಿಂದ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಲ್ಲಿನ ಕುಟುಂಬಗಳಿಗೆ ಮನವಿ ಮಾಡಿದರು. ಈಗಾಗಲೇ ತಾಲೂಕು ಆಡಳಿತ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು, ಮಳೆ ಇದೇ ರೀತಿ ಮುಂದುವರೆದಲ್ಲಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.