ಕುಶಾಲನಗರ, ಜು. ೨೩: ಲಯನ್ಸ್ ಕ್ಲಬ್ ಸದಸ್ಯರು ಸಂಬAಧಗಳನ್ನು ಕಟ್ಟುವ ಸಂಪರ್ಕ ಸೇತುಗಳಾಗಿ ಕಾರ್ಯನಿರ್ವಹಿಸ ಬೇಕು ಎಂದು ಲಯನ್ಸ್ ಮಾಜಿ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ ಅವರು ಕರೆ ನೀಡಿದರು.

ಕುಶಾಲನಗರ ಲಯನ್ಸ್ ಕ್ಲಬ್ ೨೦೨೩-೨೪ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಪ್ರತಿಯೊಬ್ಬ ಸದಸ್ಯರು ಹೊಸ ಚಿಂತನೆಗಳೊAದಿಗೆ ಸಮಾಜದಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಸ್ವಾಸ್ಥö್ಯ ಸಮಾಜದ ನಿರ್ಮಾಣಕ್ಕೆ ಕಾರಣವಾಗಬೇಕು ಎಂದರು.

ಕ್ಲಬ್ ನೂತನ ಅಧ್ಯಕ್ಷರಾಗಿ ಸುಮನ್ ಬಾಲಚಂದ್ರ, ಕಾರ್ಯದರ್ಶಿಯಾಗಿ ಟಿ.ಕೆ. ರಾಜಶೇಖರ್, ಖಜಾಂಚಿಯಾಗಿ ನಿತಿನ್ ಕುಮಾರ್ ಗುಪ್ತ ಮತ್ತು ತಂಡದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ನೂತನ ಸಾಲಿನ ಅಧ್ಯಕ್ಷ ಸುಮನ್ ಬಾಲಚಂದ್ರ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಹಲವು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳ ಲಾಗುವುದು ಎಂದು ತಿಳಿಸಿದರು.

ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ಚಿಣ್ಣಪ್ಪ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕೈ ಜೋಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಅಂಬೆಕಲ್ ನವೀನ್, ವಲಯಾಧ್ಯಕ್ಷ ಕಾನೆಹಿತ್ಲು ಸತೀಶ್ ಕುಮಾರ್, ನಿರ್ಗಮಿತ ಖಜಾಂಚಿ ಹೇಮಂತ್ ಕುಮಾರ್ ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಮಡಿಕೇರಿ, ಸುಂಟಿಕೊಪ್ಪ, ಸೋಮವಾರಪೇಟೆ ಕ್ಲಬ್ ಪದಾಧಿಕಾರಿಗಳು ಇದ್ದರು.