ಮಡಿಕೇರಿ, ಜು. ೨೪: ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ತಾ.೨೬ ರಂದು ಕಾರ್ಗಿಲ್ ವಿಜಯ ದಿನಾಚರಣೆ ಆಯೋಜಿಸಲಾಗಿದೆ.
ತಾ.೨೬ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆಯೊಂದಿಗೆ ಕಾರ್ಗಿಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ.
ಇದೇ ಸಂದರ್ಭ ವಾಯುಸೇನೆಯ ನಿವೃತ್ತ ಅಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ರೋಟರಿ ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್. ಸಂಪತ್ ಕುಮಾರ್, ರೋಟರಿ ವುಡ್ಸ್ ಕಾರ್ಯದರ್ಶಿ ಹರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.