ಗೋಣಿಕೊಪ್ಪ, ಜು. ೨೪: ಕಾವೇರಿ ಎಜುಕೇಷನ್ ಸೊಸೈಟಿ ವತಿಯಿಂದ ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಹತ್ವ ಕುರಿತು ಒಂದು ಕಾರ್ಯಗಾರವನ್ನು ಆಯೋಜಿಸ ಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ರಾಮಚಂದ್ರ ಅವರು ತಂತ್ರಜ್ಞಾನದ ತಂತ್ರಜ್ಞಾನದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಎದುರಿಸ ಬೇಕಾದ ಸವಾಲುಗಳು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಎಂ. ನಾಣಯ್ಯ ಅವರು ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್ ಕಾರ್ಲ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪದವಿ ಹಾಗೂ ಪದವಿ ಪೂರ್ವ ಉಪನ್ಯಾಸಕರ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆರಂಭದಲ್ಲಿ ದೀಪು ಮತ್ತು ಸುಶ್ಮಿತಾ ನವರು ಪ್ರಾರ್ಥಿಸಿದರು. ಉಪನ್ಯಾಸಕಿ ಕೆ. ಪಿ. ಗಾಯತ್ರಿ, ಸ್ವಾಗತಿಸಿದರು. ಉಪನ್ಯಾಸಕಿ ಎಂ.. ಪಿ. ದಮಯಂತಿ ಅವರು ನೆರೆದಿದ್ದ ಸರ್ವರನ್ನು ವಂದಿಸಿದರು. ಉಪನ್ಯಾಸಕ ಅನುಪಮ ಸಿ. ಪಿ. ಮತ್ತು ಕುಮಾರಿ ಕಾವ್ಯ ವಿ. ಆರ್. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.