ಚೆಟ್ಟಳ್ಳಿ, ಜು. ೨೪: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಪಣತೊಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದು ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಇ ತೀರ್ಥಕುಮಾರ್ ಅಭಿಪ್ರಾಯಪಟ್ಟರು. ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಗಾಂಧಿ ಯುವಕ ಸಂಘ ಸರ್ವಧರ್ಮೀಯ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಸಮಿತಿ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೨೫ ಕುರ್ಚಿಗಳ ವಿತರಣಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಎಲ್ಲರಿಗೂ ಕೀಳರಿಮೆ ಉಂಟಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕುಸಿತದಿಂದ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡುವಂತೆ ಮುತುವರ್ಜಿ ವಹಿಸಿದರೆ ಮಾತ್ರ ಸರ್ಕಾರಿ ಶಾಲೆ ಗಳು ಉಳಿಯುವಂತಾಗುವುದು. ಮುಂದಿನ ದಿನಗಳಲ್ಲಿ ಕಂಡಕರೆ ಶಾಲೆಗೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ಗಳನ್ನು ಮಾಡಲು ಶ್ರಮ ವಹಿಸ ಲಾಗುವುದೆಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವುದು ಸ್ಥಳೀಯರ ಕರ್ತವ್ಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸವನ್ನು ಪಡೆದವರು ಇಂದು ಸಮಾಜದಲ್ಲಿ ಉನ್ನತ ಸ್ಥಾನ ವನ್ನು ಅಲಂಕರಿಸಿದ್ದಾರೆ. ಸರ್ಕಾರವೂ ಸರ್ಕಾರಿ ಶಾಲೆಗಳನ್ನು ಉಳಿಸಲು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ. ಪೋಷಕರು ಇಂಗ್ಲಿಷ್ ವ್ಯಾಮೋಹ ಬಿಟ್ಟು, ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡ ಬೇಕಾಗಿದೆ.

ಇದೇ ವರ್ಷ ಗಾಂಧಿ ಯುವಕ ಸಂಘದ ವತಿ ಯಿಂದ ಸರ್ವ ಧರ್ಮೀಯ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಕಾರ್ಯ ಕ್ರಮ ನಡೆಯಲಿದೆ. ಅದರ ಅಂಗ ವಾಗಿ ವಿವಿಧ ಸಾಮಾಜಿಕ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಕಂಡಕರೆ ಶಾಲೆಯ ಅಭಿವೃದ್ಧಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವು ದೆಂದು ಇಸ್ಮಾಯಿಲ್ ಕಂಡಕರೆ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಎಂ.ಪಿ ಧನುಪ್ರಕಾಶ್, ಶಾಲೆಗೆ ೨೫ ಕುರ್ಚಿಗಳ ಅವಶ್ಯಕತೆ ಇತ್ತು. ಕಂಡಕರೆಯ ಗಾಂಧಿ ಯುವಕ ಸಂಘದ ಸದಸ್ಯರ ಬಳಿ ಕೇಳಿಕೊಂಡು ತಕ್ಷಣ ಸ್ಪಂದಿಸಿ, ಶಾಲೆಗೆ ಅತ್ಯುತ್ತಮ ಗುಣಮಟ್ಟದ ೨೫ ಕುರ್ಚಿಗಳನ್ನು ನೀಡಿದ್ದಾರೆ. ಪೋಷಕರು ಕೂಡ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕಾಗಿ ಮುಖ್ಯೋಪಾಧ್ಯಾಯರಾದ ಎ.ಪಿ ಧನುಪ್ರಕಾಶ್ ಅಭಿಪ್ರಾಯಪಟ್ಟರು.

ಕಂಡಕರೆ ಶಾಲೆಯಿಂದ ವರ್ಗಾವಣೆಗೊಂಡ ದೈಹಿಕ ಶಿಕ್ಷಕ ಹೆಚ್. ದಿನಕರ್ ಶೆಟ್ಟಿ ಹಾಗೂ ಸಹ ಶಿಕ್ಷಕಿಯಾದ ಟಿ.ಪಿ ಜನಿತ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಗಾಂಧಿ ಯುವಕ ಸಂಘದ ಉಪಾಧ್ಯಕ್ಷ ಸವಾದ್ ಉಸ್ಮಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಹ ಶಿಕ್ಷಕರಾದ ರತೀಶ್ ಟಿ.ಎನ್ ಕಾರ್ಯಕ್ರಮವನ್ನು ನಿರೂಪಿಸಿದರು. ಗಾಂಧಿ ಯುವಕ ಸಂಘದ ಕಾರ್ಯದರ್ಶಿ ಸುಹೈಲ್ ಓ.ಎಸ್ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಿಹಿ ತಿಂಡಿ ವಿತರಿಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸಜೀನಾ ಈ.ಯು,ಆಶಾ ಕಾರ್ಯಕರ್ತೆ ಸುಮಿತ್ರ ಕಂಡಕರೆ, ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಷರೀಫ್ ಪಿ.ಎಂ, ಉಪಾಧ್ಯಕ್ಷ ಇರ್ಷಾದ್ ಕೆ.ಎಂ, ಶಿಬಿಲ್ ಕೆ.ಜೆ, ಸದಸ್ಯೆ ಕರೀಮ್ ಪಿ.ಎಂ ಹಾಗೂ ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು ಇದ್ದರು.