ವೀರಾಜಪೇಟೆ, ಜು. ೨೪: ಕೊಡಗು ಪತ್ರಕರ್ತರ ಸಂಘ, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘ ಹಾಗೂ ಅರಮೇರಿ ಕಳಂಚೇರಿ ಮಠದ ಎಸ್.ಎಂ.ಎಸ್ ವಿದ್ಯಾಪೀಠದ ಸಂಯುಕ್ತ ಆಶ್ರಯದಲ್ಲಿ ತಾ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಪತ್ರಿಕಾ ದಿನಾಚರಣೆಯನ್ನು ಅರಮೇರಿ ಕಳಂಚೇರಿ ಮಠದಲ್ಲಿ ಆಯೋಜಿಸಲಾಗಿದೆ. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಎ. ಮುರಳಿಧÀರ್ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಚಿಪ್ಪಿ ಕಾರ್ಯಪ್ಪ, ಹಾಗೂ ಮುಖ್ಯ ಭಾಷಣಕಾರರಾಗಿ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಭಾಗವಹಿಸಲಿದ್ದಾರೆ. ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಉಪಸ್ಥಿತರಿರುತ್ತಾರೆ.

ಪತ್ರಿಕಾ ದಿನಾಚರಣೆಯ ಅಂಗವಾಗಿ ಆರು ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರಾದ ಮುಲ್ಲೆಂಗಡ ಶಂಕರಿ ಪೊನ್ನಪ್ಪ, ಚೋಕಿರ ಪವಿತ್ರ ಪೂವಯ್ಯ ಸೈಯದ್ ಇರ್ಫಾನ್, ಶ್ರೀಧರ್ ಹೂವಲ್ಲಿ, ಅಂಚೆಮನೆ ಸುಧಿ ಕುಮಾರ್ ಹಾಗೂ ಶ್ರೀಧರ್ ನೆಲ್ಲಿತ್ತಾಯ ಇವರುಗಳನ್ನು ಸನ್ಮಾನಿಸಲಾಗುವುದು. ಎಂದು ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಧೋಶ್ ಪೂವಯ್ಯ ತಿಳಿಸಿದ್ದಾರೆ.