ಮಡಿಕೇರಿ, ಜು. ೨೫: ಜಿಲ್ಲಾ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ತಾ. ೨೬ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ೧೯೯೯ ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದು ವಿಜಯ ಪತಾಕೆ ಹಾರಿಸಿದ್ದ ಸೈನಿಕರ ತ್ಯಾಗ, ಬಲಿದಾನ, ಶೌರ್ಯ ಗಳನ್ನು ಗೌರವಿಸುವ ಸಲುವಾಗಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಪ್ರಯುಕ್ತ ಇಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಪರಿವರ್ತನಾ ಟ್ರಸ್ಟ್ ಬೆಂಗಳೂರು ಹಾಗೂ ಬ್ಲಡ್ ಬ್ಯಾಂಕ್ ಮಡಿಕೇರಿ ಇವರ ಸಹಯೋಗ ದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಮೇಜರ್ ಬಿದ್ದಂಡ ನಂಜಪ್ಪ ಹಾಗೂ ಕಾರ್ಯಕ್ರಮದ ದಿಕ್ಸೂಚಿ ಭಾಷಣ ಕಾರರಾಗಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕೆ.ಟಿ. ಉಲ್ಲಾಸ್ ಅವರು ಆಗಮಿಸಲಿದ್ದಾರೆ ಎಂದು ವೇದಿಕೆಯ ಜಿಲ್ಲಾ ಸಂಯೋಜಕ್ ಕುಕ್ಕೇರ ಅಜಿತ್ ತಿಳಿಸಿದ್ದಾರೆ.