ಕುಶಾಲನಗರ, ಜು. ೨೫: ಕುಶಾಲನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಾಗವನ್ನು ಅತಿ ಕ್ರಮಣಕಾರರಿಂದ ಸಂರಕ್ಷಿಸುವAತೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಕಳೆದ ೪ ದಶಕಗಳಿಂದ ಕುಶಾಲನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಬದಿಯಲ್ಲಿರುವ ಜಾಗವನ್ನು ಖಾಸಗಿ ಲೇಔಟ್‌ಗೆ ಸಂಬAಧಿಸಿದವರು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಆರೋಪಿಸಿದ್ದಾರೆ.

ಈ ಬಗ್ಗೆ ಸಂಬAಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಕುಶಾಲನಗರದ ಕಾಂಗ್ರೆಸ್ ಮುಖಂಡರು ಇದ್ದರು.