ಮಡಿಕೇರಿ, ಜು. ೨೬: ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ತಾ.೨೮ ರಂದು ಶಾಸಕದ್ವಯರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ ೯.೩೦ ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.