ಚೆಯ್ಯಂಡಾಣೆ, ಜು. ೨೫: ಚೆಯ್ಯಂಡಾಣೆ, ಕೋಕೇರಿ, ಚೇಲಾವರ, ನರಿಯಂದಡ, ಎಡಪಾಲ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ಸಮಸ್ಯೆಯಾಗುತ್ತಿದ್ದು ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನ ಇಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವಿದ್ಯುತ್ ಸಮಸ್ಯೆಯಿಂದ ನೆಟ್‌ವರ್ಕ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮೊಬೈಲ್ ಚಾರ್ಜಿಂಗ್ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಖಾಯಂ ಲೈನ್‌ಮೆನ್ ಇಲ್ಲದೆ ವರ್ಷಗಳೇ ಕಳೆದಿವೆ. ಇರುವ ತಾತ್ಕಾಲಿಕ ಲೈನ್‌ಮೆನ್ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ‘ಶಕ್ತಿ’ಯೊಂದಿಗೆ ಹಂಚಿಕೊAಡಿದ್ದಾರೆ.

ಚೇಲಾವರದಲ್ಲಿ ೩ ವರ್ಷಕ್ಕೂ ಹಿಂದೆ ಹಾನಿಯಾದ ಟ್ರಾನ್ಸ್ ಫಾರ್ಮರ್ ಇನ್ನೂ ದುರಸ್ತಿಪಡಿಸಿಲ್ಲ, ವಿದ್ಯುತ್ ಕಂಬಗಳು ಶಿಥಿಲಗೊಂಡಿವೆ. ಮಳೆಗಾಲದಲ್ಲಿ ಚೇಲಾವಾರದಲ್ಲಿ ಪ್ರತ್ಯೇಕವಾಗಿ ವಿದ್ಯುತ್ ಸರಬರಾಜು ಕಡಿತಗೊಂಡಿರುತ್ತದೆ. ಕೂಡಲೇ ಸಮಸ್ಯೆ ಪರಿಹರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ದನೋಜ್ ಪೊಕ್ಕುಳಂಡ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ನೊಂದಿದ್ದಾರೆ. ಕೂಡಲೇ ಸಂಬAಧಪಟ್ಟ ಚೆಸ್ಕಾಂ ಇಲಾಖೆ ಎಚ್ಚೆತ್ತುಕೊಳ್ಳಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಶ್ರಫ್