ಕುಶಾಲನಗರ, ಜು. ೨೫: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಕೆಲ ಪ್ರದೇಶಗಳಿಗೆ ಉಸ್ತುವಾರಿ ಸಚಿವರಾದ ಬೋಸರಾಜು ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹ ಪೀಡಿತ ಕುಶಾಲನಗರದ ಸಾಯಿ ಬಡಾವಣೆಗೆ ತೆರಳಿ ಸಂತ್ರಸ್ತರೊAದಿಗೆ ಮಾತುಕತೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಬಳಿಕ ಹಾರಂಗಿ ಜಲಾಶಯಕ್ಕೂ ಭೇಟಿ ನೀಡಿದರು. ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಬೋಸರಾಜು ಅವರು, ಕಾವೇರಿ ನದಿ ತಟದ ಹಲವು ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ನದಿ ತಟದಲ್ಲಿ ತಡೆಗೋಡೆ ನಿರ್ಮಾಣವಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಇನ್ನೂ ಕೆಲವರು ನದಿಯ ಹೂಳು, ಮರಳು ತೆಗೆಸಬೇಕು ಎಂದು ಕೋರಿದ್ದಾರೆ. ಭತ್ತ, ಕಾಫಿ ಸೇರಿದಂತೆ ವಿವಿಧ ಬೆಳೆಗಳ ನಷ್ಟದ ಬಗ್ಗೆ ರೈತರೂ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳಿಂದ ಕೂಡ ಪ್ರವಾಹದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲರ ಅಭಿಪ್ರಾಯ, ಮಾಹಿತಿ ಸಂಗ್ರಹಿಸಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಪ್ರಾಕೃತಿಕ ವಿಕೋಪದಿಂದ ಉಂಟಾದ ಸಮಸ್ಯೆಗಳ ಬಗ್ಗೆ ಸಂಬAಧಿಸಿದ ಸಮಿತಿ ವರದಿ ತಯಾರಿಸುತ್ತಿದೆ. ಆ ವರದಿಯನ್ನು ಆಧರಿಸಿ ಕೊಡಗಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ತೀರ್ಮಾನಿಸಲಾಗುತ್ತದೆ. ತಾ.೨೬ ರಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಉಸ್ತುವಾರಿಗಳ ಸಭೆ ನಡೆಸಲಿದ್ದು, ಸಭೆಯಲ್ಲಿ ಕೊಡಗಿನಲ್ಲಿ ಮಳೆಯಿಂದಾಗಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಾಗುವುದು.
ಅಲ್ಲದೆ ಐಸಿಸಿ ಸಭೆ ನಡೆಸಿ ಡಿಸಿ, ಶಾಸಕರು, ಸಿಇಓ ಸೂಕ್ತ ಕ್ರಮಕ್ಕೆ ಯೋಜನೆ ರೂಪಿಸುತ್ತೇವೆ ಎಂದು ಬೋಸರಾಜು ಹೇಳಿದರು.
ಈ ಸಂದರ್ಭ ಕ್ಷೇತ್ರ ಶಾಸಕರಾದ ಡಾ. ಮಂಥರ್ಗೌಡ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ. ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಡಿವೈಎಸ್ಪಿ ಗಂಗಾಧರಪ್ಪ ಮತ್ತಿತರರು ಇದ್ದರು. ನಂತರ ಕಂದಾಯ ಸಚಿವ ಕೃಷ್ಣಬೈರೇಗೌಡ ಕುಶಾಲನಗರ-ಕೊಪ್ಪ ಗಡಿ ಭಾಗದಲ್ಲಿ ಶಾಸಕ ಮಂಥರ್ ಗೌಡ ಅವರಿಂದ ಮಾಹಿತಿ ಪಡೆದರು.