ಚೆಟ್ಟಳ್ಳಿ, ಜು. ೨೬: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.
ಕೊಂಡAಗೇರಿ ವಲಯ ಕಾಂಗ್ರೆಸ್ ಇಲ್ಲಿನ ಶಾದಿಮಲ್‌ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವೀರಾಜ ಪೇಟೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಗುರಿ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಎಲ್ಲರೂ ಬಳಸಿ, ಸರ್ಕಾರದ ಯೋಜನೆಯ ಲಾಭವನ್ನು ಪಡೆಯಿರಿ. ಎಲ್ಲರೂ ಸಾಮಾಜಿಕ ಭದ್ರತೆ ಹಾಗೂ ಸೌಹಾರ್ದತೆಯಿಂದ ಪರಸ್ಪರ ಅನ್ಯೋನ್ಯತೆಯಿಂದ ಬದುಕಬೇಕು. ಕೊಂಡAಗೇರಿ ಗ್ರಾಮಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯ ಗಳನ್ನು ಒದಗಿಸಲಾಗುವುದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭರವಸೆ ನೀಡಿದರು.
ಪ್ರಾಸ್ತಾವಿಕ ಮಾತನಾಡಿದ ಹಾಲುಗುಂದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುರಹಮಾನ್ (ಅಂದಾಯಿ) ವೀರಾಜಪೇಟೆ ಕ್ಷೇತ್ರದಲ್ಲಿ ೨೦ ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಲು ಕೊಂಡAಗೇರಿ ಗ್ರಾಮದ ಜನತೆ ದೊಡ್ಡ ಕೊಡುಗೆ ನೀಡಿದೆ.
ಪ್ರತೀ ಬಾರಿಯ ಚುನಾವಣೆ ಯಲ್ಲಿ ಕೊಂಡAಗೇರಿ ಗ್ರಾಮಸ್ಥರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ೨೦೧೯ ರಲ್ಲಿ ಕೊಂಡAಗೇರಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಪರಿಹಾರ ಸಿಗದ ಸಂತ್ರಸ್ತರಿಗೆ ಪರಿಹಾರ ನೀಡಲು ಶಾಸಕರು ಕೂಡಲೇ ಕ್ರಮವಹಿಸ ಬೇಕೆಂದು ಮನವಿ ಮಾಡಿದರು. ಕೊಂಡAಗೇರಿಯಲ್ಲಿ ರಸ್ತೆ ಸಮಸ್ಯೆ ಹಾಗೂ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಅವಶ್ಯಕತೆ ಇದ್ದು ಶಾಸಕರು ಇದರ ಬಗ್ಗೆ ಗಮನಹರಿಸಬೇಕಾಗಿ ಮನವಿ ಮಾಡಿದರು. ಕೊಂಡAಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಎ.ಎಂ ಅಬ್ದುಲ್ಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್ ಅವರಿಗೆ ಕೊಂಡAಗೇರಿ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ. ಶಾದುಲಿ, ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತೆ ಬೊಳ್ಳಿ, ಉಪಾಧ್ಯಕ್ಷ ದಿನೇಶ್ (ಕುಶ), ಕೊಂಡAಗೇರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಕೆ. ಯೂಸುಫ್ ಹಾಜಿ, ಸಿ.ಎಂ ಹಂಸ, ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಕೊಂಡAಗೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಝಕರೀಯ, ಕಾಂಗ್ರೆಸ್ ಕಾರ್ಯಕರ್ತರಾದ ಸಾಮೀರ್, ಇಸ್ಮಾಯಿಲ್, ಶಿಯಾಬ್ ಇದ್ದರು.