ಸುಂಟಿಕೊಪ್ಪ, ಜು. ೨೫: ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸುಂಟಿಕೊಪ್ಪದ ಪಕ್ಷದ ಕಚೇರಿಯಲ್ಲಿ ಚುನಾವಣಾ ಪೂರ್ವಭಾವಿ ಸಭೆಯು ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮುಂದಿನ ದಿನಗಳಲ್ಲಿ ನಡೆಯಲ್ಲಿದ್ದು ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧರಾಗಬೇಕು. ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸುವ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಹಂತದ ಆಯ್ಕೆ ಪ್ರಕ್ರಿಯೆಗೆ ನಮ್ಮ ಪಕ್ಷದವರು ಸ್ಪರ್ಧೆಗೆ ಇಳಿಯಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ಪಡೆಯುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು. ಕಳೆದ ೨ ಅವಧಿಯಲ್ಲೂ ಕಾಂಗ್ರೆಸ್ ಜೆಡಿಎಸ್ ಬೆಂಬಲವನ್ನು ನೀಡುತ್ತಾ ಬರುತ್ತಿದ್ದು, ಈ ಬಾರಿ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ಪಡೆದು ಅಧಿಕಾರಿ ಪ್ರಯತ್ನಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ನಾಯಕ ಅಬ್ರಾಹರ್, ಕೊಡಗು ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಕಾರ್ಯದರ್ಶಿ ಬಶೀರ್, ಪಂಚಾಯಿತಿ ಸದಸ್ಯೆ ನಾಗರತ್ನ, ಮನ್ಸೂರ್, ಕೆ.ಎ. ಉಸ್ಮಾನ್, ನಗರಾಧ್ಯಕ್ಷ ಬಾಶಿತ್, ಹಾಗೂ ಕೆ.ಎ. ಲತೀಫ್, ಪಂಚಾಯಿತಿ ಸದಸ್ಯರುಗಳಾದ ಹಸೀನಾ, ಮಂಗಳಾಮ್ಮ ಹಾಗೂ ಕಾರ್ಯಕರ್ತರು ಇದ್ದರು.