ಮಡಿಕೇರಿ, ಜು. ೨೭: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹಾಗೂ ಮಡಿಕೇರಿ ಮುಖ್ಯ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ೨೦೨೨-೨೩ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರಿಗೆ ಹಾಗೂ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ತಾ. ೨೮ ರಂದು (ಇಂದು) ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ಕಾರ್ಯಾಗಾರ ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ.