ಹಾಲಿನ ದರ ಹೆಚ್ಚಳಕ್ಕೆ ತೀರ್ಮಾನ
ಬೆಂಗಳೂರು, ಜು. ೨೭: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ೩ ರೂಪಾಯಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ಸೇರಿದಂತೆ ಸಭೆಯಲ್ಲಿ ೧೫ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು. ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಮ್ಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಲು ರೂ. ೧೩೦.೪೦ ಕೋಟಿ ಮಂಜೂರು ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರದಲ್ಲಿ ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಖುಷ್ಬೂ ಭೇಟಿಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ
ಬೆಂಗಳೂರು, ಜು. ೨೭: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವೀಡಿಯೋವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟಿçÃಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರA ಇಂದು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಪ್ರತಿಕ್ರಿಯೆ ಕೇಳಿದಾಗ, ರಾಷ್ಟಿçÃಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ; ಇಲ್ಲಿಗೆ ಬಂದಿದ್ದಾರೆ ಎಂದು ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುಡುಗಿದರು. ಮಹಿಳಾ ಆಯೋಗದವರು ಬರಲಿ, ಬೇಡ ಅನ್ನಲು ನಾನಾರು, ಆದರೆ ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವವರು ಮಣಿಪುರದಲ್ಲಿ ಪರಿಸ್ಥಿತಿ ಏನಾಗಿದೆ, ಅಲ್ಲಿ ಮಹಿಳೆಯರ ಮೇಲೆ ಯಾವ ರೀತಿ ದೌರ್ಜನ್ಯ ನಡೆದಿದೆ ಎಂದು ಗೊತ್ತಿದ್ದರೂ ಇದುವರೆಗೆ ಹೋಗಿ ವಿಚಾರಿಸಿಲ್ಲ ಎಂದು ಆರೋಪಿಸಿದ್ದಾರೆ.
‘ಅಧಿಕಾರಕ್ಕಾಗಿ ಮಣಿಪುರವನ್ನಷ್ಟೇ ಅಲ್ಲ ದೇಶವನ್ನೇ ಸುಡುತ್ತಾರೆ’
ನವದೆಹಲಿ, ಜು. ೨೭: ಬಿಜೆಪಿ-ಆರ್ಎಸ್ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ-ಆರ್ಎಸ್ಎಸ್ಗೆ ಅಧಿಕಾರ ಮಾತ್ರ ಬೇಕು ಮತ್ತು ಅಧಿಕಾರಕ್ಕಾಗಿ ಅವರು ಏನು ಬೇಕಾದರೂ ಮಾಡುತ್ತಾರೆ. ಅಧಿಕಾರಕ್ಕಾಗಿ ಅವರು ಮಣಿಪುರವನ್ನು ಸುಡುತ್ತಾರೆ. ಅಷ್ಟೇ ಅಲ್ಲ, ಕುರ್ಚಿಗಾಗಿ ದೇಶವನ್ನು ಬೇಕಿದ್ದರೆ ಸುಡುತ್ತಾರೆ. ಅವರು ದೇಶದ ದುಃಖ ಮತ್ತು ನೋವಿನ ಬಗ್ಗೆ ಎಂದಿಗೂ ಕಾಳಜಿ ವಹಿಸುವುದಿಲ್ಲ ಎಂದು ಆರೋಪಿಸಿದ್ದಾರೆ.
ಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಕಲಾಪ ಮುಂದೂಡಿಕೆ
ನವದೆಹಲಿ, ಜು. ೨೭: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಸದನದಲ್ಲಿ ಪ್ರಧಾನಿಯವರ ಉಪಸ್ಥಿತಿಗೆ ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ, ಫಲಕಗಳನ್ನು ಪ್ರದರ್ಶಿಸಿದರು. ಇದರ ನಡುವೆಯೇ ಸದನವು ಸಂಕ್ಷಿಪ್ತ ಚರ್ಚೆಗಳ ನಂತರ ಎರಡು ಮಸೂದೆಗಳನ್ನು ಅಂಗೀಕರಿಸಿತು. ಬಳಕೆಯಲ್ಲಿಲ್ಲದ ಕಾನೂನುಗಳನ್ನು ರದ್ದುಗೊಳಿಸುವ ಜನ ವಿಶ್ವಾಸ (ನಿಬಂಧನೆಗಳ) ತಿದ್ದುಪಡಿ ಕಾಯ್ದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಮಣಿಪುರ ವಿಚಾರವಾಗಿ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದಿದ್ದು, ಸದನವನ್ನು ಮೂರು ಬಾರಿ ಮುಂದೂಡಲು ಕಾರಣವಾಯಿತು.
ನಕ್ಸಲ್ ಚಟುವಟಿಕೆ ಆರೋಪ ಹೊತ್ತಿದ್ದವರ ಬಿಡುಗಡೆ
ಬೆಂಗಳೂರು, ಜು. ೨೭: ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳನ್ನು ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಸಾಕ್ಷಾö್ಯಧಾರ ಕೊರತೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಿ.ಜಿ. ಕೃಷ್ಣಮೂರ್ತಿ ಅಲಿಯಾಸ್ ಭಾಸ್ಕರ್ (೩೫), ಶಿವಮೊಗ್ಗ ಜಿಲ್ಲೆಯ ಹೊಸಗದ್ದೆ ಪ್ರಭಾ ಅಲಿಯಾಸ್ ನೇತ್ರ (೨೪), ಚಿಕ್ಕಮಗಳೂರು ಜಿಲ್ಲೆಯ ಸಾವಿತ್ರಿ ಅಲಿಯಾಸ್ ಉಷಾ (೧೮) ಎಂಬವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ. ಮೂವರು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಸಾಕ್ಷಾö್ಯಧಾರಗಳು ಲಭ್ಯವಾಗಿಲ್ಲ. ಹೀಗಾಗಿ ಐಪಿಸಿ ಮತ್ತು ಯುಎಪಿಎಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ಗಂಗಾಧರ ಸಿ.ಎಂ ತೀರ್ಪಿನಲ್ಲಿ ಹೇಳಿದ್ದಾರೆ.
ಗೃಹ ಸಚಿವರ ಮನೆ ಎದುರು ಪ್ರತಿಭಟನೆ
ಬೆಂಗಳೂರು, ಜು. ೨೭: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ. ಆರೋಪಿ ಯುವತಿಯರ ಪರವಾಗಿ ಸರ್ಕಾರ ನಿಂತುಕೊAಡAತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಬೆಂಗಳೂರಿನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಅದೇ ರೀತಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕರಾವಳಿ ಜಿಲ್ಲಾ ಕೇಂದ್ರವಾದ ಉಡುಪಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಮೂರು ವರ್ಷಗಳ ಹಿಂದೆ ನಡೆದ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆಯಲ್ಲಿ ಗಲಭೆಕೋರರ ವಿರುದ್ಧದ ಪೊಲೀಸ್ ಕೇಸ್ ಹಿಂಪಡೆಯಲು ಪರಮೇಶ್ವರ್ ಅವರು ನೋಡುತ್ತಿದ್ದಾರೆ, ಆರೋಪಿಗಳ ಪರವಾಗಿದ್ದಾರೆ ಎಂದು ಆರೋಪಿಸಿ ಪರಮೇಶ್ವರ ಅವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು.