ಮಡಿಕೇರಿ, ಜು. ೨೬: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸರಕಾರದಿಂದ ದೊರೆಯುವ ರೂ. ೧೦ ಲಕ್ಷ ಮೊತ್ತದ ಪರಿಹಾರ ಚೆಕ್ ಅನ್ನು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಸ್ತಾಂತರಿಸಿದರು.
ಮೇ ೧೬ರಂದು ಪಾಲಿಬೆಟ್ಟದ ಮಸ್ಕಲ್ ಕಾಫಿತೋಟದಲ್ಲಿ ಕಾಡಾನೆ ದಾಳಿಯಿಂದ ಬಾಬಿ ಎಂಬ ಕಾರ್ಮಿಕ ಗಂಭೀರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೇ ೧೮ ರಂದು ಮೃತಪಟ್ಟಿದ್ದರು. ಈ ವೇಳೆ ರೂ. ೫ ಲಕ್ಷ ಚೆಕ್ ಅನ್ನು ಅರಣ್ಯ ಇಲಾಖಾಧಿಕಾರಿಗಳು ವಿತರಿಸಿದ್ದರು.
ವೀರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮೃತ ಬಾಬಿ ಪತ್ನಿ ಭಾರತಿಯವರಿಗೆ ಬಾಕಿ ರೂ. ೧೦ ಲಕ್ಷ ಚೆಕ್ನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭ ವೀರಾಜಪೇಟೆಯ ಅರಣ್ಯ ವಲಯ ಅಧಿಕಾರಿ ದೇವಯ್ಯ ಸೇರಿದಂತೆ ಇತರರು ಹಾಜರಿದ್ದರು.