ಸೋಮವಾರಪೇಟೆ, ಜು. ೨೬: ಹಿರಿಯ ಕವಯತ್ರಿ, ಲೇಖಕಿ, ಪಟ್ಟಣದ ಬಸವೇಶ್ವರ ರಸ್ತೆ ನಿವಾಸಿ ಜಲಜಾ ಶೇಖರ್ ಅವರು ರಚಿಸಿರುವ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತಾ. ೩೦ರಂದು ಪೂರ್ವಾಹ್ನ ೧೦.೩೦ಕ್ಕೆ ಸ್ಥಳೀಯ ಮಹಿಳಾ ಸಮಾಜದಲ್ಲಿ ನಡೆಯಲಿದೆ.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ಕವನ ಸಂಕಲನ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಜಾನಪದ ವಿದ್ವಾಂಸ ಬೆಸೂರು ಮೋಹನ್ ಪಾಳೇಗಾರ್, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಹಿರಿಯ ಕಾದಂಬರಿಗಾರ್ತಿ ಜಲಾ ಕಾಳಪ್ಪ, ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್, ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್ ಅವರುಗಳು ಭಾಗವಹಿಸಲಿದ್ದಾರೆ.