ಪೊನ್ನಂಪೇಟೆ, ಜು. ೨೭: ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರ ಅನುಮತಿ ಮೇರೆಗೆ ಕೊಡಗು ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ನೇತೃತ್ವದಲ್ಲಿ ಪೌರಕಾರ್ಮಿಕರ ಸಂಘದ ಕೊಡಗು ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಉಪಾಧ್ಯಕ್ಷರಾಗಿ ಪೊನ್ನಂಪೇಟೆಯ ಆರ್. ಪರಮೇಶ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪೊನ್ನಂಪೇಟೆಯ ಮಂಜು ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.