ಮಡಿಕೇರಿ, ಜು. ೨೬ : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವAತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಹವಮಾನ, ಮಳೆ-ಬೆಳೆ ಸಂಬAಧಿತ ಸ್ಥಿತಿಗತಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜೊತೆ ನಡೆದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು.

ವ್ಯಾಪಕ ಮಳೆಯಿಂದ ಉಂಟಾಗಬಹುದಾದ ಅನಾಹುತ ತಡೆಯಲು ಜಿಲ್ಲಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹಾಗೆಯೇ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು ಎಂದರು.

ಉಪಮುಖ್ಯಮAತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಸಂಬAಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಓಗಳ ದೂರವಾಣಿ ಸಂಖ್ಯೆ ಜನರಿಗೆ ದೊರೆಯುವಂತಿರಬೇಕು ಎಂದು ಸೂಚಿಸಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮಾತನಾಡಿ, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜುಲೈ ೨೯ ರ ವರೆಗೆ ಮಳೆ ಇರಲಿದೆ.

(ಮೊದಲ ಪುಟದಿಂದ) ಆ ನಂತರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಒಟ್ಟು ೫೪೦ ಕೊಟಿ ರೂ ಇದ್ದು, ಅಗತ್ಯ ಇರುವ ಕಡೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿ, ಈ ಸಾಲಿನಲ್ಲಿ ೬೯ ಮನೆಹಾನಿ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ೨ (ಎ ವರ್ಗ) ಮನೆಹಾನಿ (ಪೂರ್ಣ ಹಾನಿ), ೬ ತೀವ್ರ ಹಾನಿ (ಬಿ ವರ್ಗ) ಹಾಗೂ ೬೧ ಭಾಗಶಃ ಹಾನಿ (ಸಿ ವರ್ಗ) ಪ್ರಕರಣಗಳು ಕಂಡು ಬಂದಿದೆ ಎಂದರು.

ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ೧ ಮಾನವ ಪ್ರಾಣ ಹಾನಿ ಪ್ರಕರಣ ವರದಿಯಾಗಿದೆ. ಉಳಿದಂತೆ ೯ ಜಾನುವಾರು ಹಾನಿ, ೭ ಜಾನುವಾರು ಕೊಟ್ಟಿಗೆ ಹಾನಿ ಪ್ರಕರಣ ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯನುಸಾರ ಪರಿಹಾರ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

೧೪೯೬ ವಿದ್ಯುತ್ ಕಂಬಗಳು, ೦.೫ ಕಿ.ಮೀ ವಿದ್ಯುತ್ ತಂತಿ ಹಾನಿ, ೭೨ ಟ್ರಾನ್ಸ್ಫಾರ್ಮರ್ ಹಾನಿ, ೬ ಅಂಗನವಾಡಿ ಕಟ್ಟಡ ಹಾನಿ, ೧ ಶಾಲಾ ಕಟ್ಟಡ ಹಾನಿ ಹಾಗೂ ೧ ಸೇತುವೆ ಹಾನಿ ವರದಿಯಾಗಿದೆ.

ಕಂದಾಯ, ಪೊಲೀಸ್, ಅರಣ್ಯ, ಪಂಚಾಯತ್ ರಾಜ್, ಅಗ್ನಿಶಾಮಕ ಹಾಗೂ ವಿವಿಧ ಇಲಾಖೆಗಳ ಜೊತೆಗೆ ಎನ್‌ಡಿಆರ್‌ಎಫ್ ತಂಡಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಶಾಸಕ ಡಾ. ಮಂಥರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಲ್ಲಾಳ್, ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬನಾ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್, ಹಾರಂಗಿ ಜಲಾಶಯ ಇಂಜಿನಿಯರ್ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸಿದ್ದೇಗೌಡ, ಸೆಸ್ಕ್ ಇಂಜಿನಿಯರ್ ಅನಿತಾ ಬಾಯಿ, ಗ್ರಾಮೀಣ ಅಭಿವೃದ್ಧಿ ವಿಭಾಗದ ಇಂಜಿನಿಯರ್ ಸುರೇಶ್‌ಕುಮಾರ್, ಇತರರು ಇದ್ದರು.