ಪೊನ್ನಂಪೇಟೆ, ಜು. ೨೭: ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಮತ್ತು ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಹತ್ವ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಎದುರಿಸಬೇಕಾದ ಸವಾಲುಗಳು ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮೈಸೂರು ವಿಶ್ವವಿದ್ಯಾನಿಲಯ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ಪ್ರಾಧ್ಯಾಪಕರಾದ ಡಾ. ಎನ್.ಬಿ. ರಾಮಚಂದ್ರ ಅವರು ಮಾತನಾಡಿ, ತಂತ್ರಜ್ಞಾನದ ಬಳಕೆಯಿಂದ ಇಂದು ಸಂವಹನ ಅತ್ಯಂತ ಸುಲಭವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನದ ಪಾತ್ರ ಅತ್ಯಂತ ಪ್ರಮುಖವಾಗಿದೆ. ಇಂದಿನ ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಕಲಿಕೆಗೂ ಕೂಡ ಪೂರಕವಾಗಿದೆ. ಹಿಂದಿನ ಕಾಲದಂತೆ ಈಗ ವಿಷಯ ಸಂಗ್ರಹಕ್ಕಾಗಿ ಪುಸ್ತಕಗಳನ್ನು ಹುಡುಕಿಕೊಂಡು ಅಲೆದಾಡುವ ಪರಿಸ್ಥಿತಿ ಇಲ್ಲ. ತಮ್ಮ ಮೊಬೈಲ್ ಮೂಲಕ ಗೂಗಲ್ನಲ್ಲಿ ಪ್ರಪಂಚದ ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಬಹುದು ಎಂದರು. ವಿಜ್ಞಾನದಿಂದ ಮನುಷ್ಯನನ್ನು ತಯಾರು ಮಾಡಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಆದರೆ ಮನುಷ್ಯನಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸಲು ವಿಜ್ಞಾನಕ್ಕೆ ಸಾಧ್ಯವಿಲ್ಲ. ಒಳ್ಳೆಯ ಗುಣವನ್ನು ಮನುಷ್ಯ ತನ್ನಿಂತಾನೆ ಬೆಳೆಸಿಕೊಳ್ಳಬೇಕು.
ಮನುಷ್ಯನಲ್ಲಿನ ಬಹುತೇಕ ಗುಣಗಳು ಆತನ ವಂಶಾವಳಿಯಿAದ ಬರುತ್ತದೆ. ಕೆಲವನ್ನು ಮಾತ್ರ ಮನುಷ್ಯ ತನ್ನ ಸ್ವಂತಿಕೆಯಿAದ ಬೆಳೆಸಿಕೊಳ್ಳುತ್ತಾನೆ ಎಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡು, ಸತತ ಪರಿಶ್ರಮದ ಮೂಲಕ ಬದುಕಿನಲ್ಲಿ ಯಶಸ್ಸು ಗಳಿಸಲು ಪ್ರಯತ್ನಿಸಬೇಕು.
ಸಾಧನೆಯ ಹಾದಿಯಲ್ಲಿ ಏಳು ಬೀಳುಗಳು ಸಾಮಾನ್ಯ, ಆದರೆ ಯಾವುದಕ್ಕೂ ಧೃತಿಗೆಡದೆ ಮುನ್ನಡೆದಾಗ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಪ್ಪ, ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ, ಉಪನ್ಯಾಸಕರಾದ ಕುಸುಮ್, ಜಸಿಂತ, ಚೇತನ್ ಚಿಣ್ಣಪ್ಪ, ಯಕ್ಷಿತ ಹಾಗೂ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.