ಕೂಡಿಗೆ, ಜು. ೨೭: ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಿಗೆ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಭೇಟಿ ನೀಡಿ ಗೃಹಲಕ್ಷಿö್ಮ ಯೋಜನೆಗೆ ಸಂಬAಧಿಸಿದ ಬಗ್ಗೆ ಪರಿಶೀಲನೆ ನಡೆಸಿದರು. ಕೇಂದ್ರದ ನೌಕರರು ಗೃಹಲಕ್ಷಿö್ಮ ಫಲಾನುಭವಿಗಳ ಸಮಗ್ರವಾದ ದಾಖಲೆಯನ್ನು ಪರಿಶೀಲನೆ ಅನುಕೂಲವಾಗುವಂತೆ ಸ್ಪಂದಿಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ ನಂಜರಾಯಪಟ್ಟಣ, ಕೂಡಿಗೆ ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮದ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.