ಮಡಿಕೇರಿ, ಜು. ೨೭ : ತಾ.೩೦ ರಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್, ಸ್ಥಾನೀಯ ಸಮಿತಿ ಕುಶಾಲನಗರದ ವಾರ್ಷಿಕ ಮಹಾಸಭೆ ಸಮಿತಿಯ ಅಧ್ಯಕ್ಷ ಬಿ.ಅಮೃತ್‌ರಾಜ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಮಧ್ಯಾಹ್ನ ೩.೩೦ ಕ್ಕೆ ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಚೇಂಬರ್ ಮಾಜಿ ಅಧ್ಯಕ್ಷ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.