ಮಡಿಕೇರಿ, ಜು. ೨೭: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ ‘ಭವಿಷ್ಯ ನಿಧಿ ನಿಮ್ಮ ಹತ್ತಿರ’ ೨.೦ ಅಡಿಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯಿಂದ ಗುಡ್ಡೆಹೊಸೂರು ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು. ಉದ್ಯೋಗದಾತರು, ಉದ್ಯೋಗಿಗಳು ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲಾಯಿತು.
ಪ್ರವರ್ತನ ಅಧಿಕಾರಿ ಬಿ.ಎನ್ ರಮೇಶ್, ಎಸ್.ಎಸ್.ಎಸ್.ಎ ಪಿ.ಎಂ ಸುಲೋಚನಾ, ಎಸ್.ಎಸ್.ಎ ತೇಜಸ್ ಕೃಷ್ಣನ್ ಹಾಗೂ ಇತರರು ಇದ್ದರು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆರ್.ಕುಮಾರಸ್ವಾಮಿ, ಹೊಟೇಲ್ ಹಾಗೂ ರೆಸಾರ್ಟ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ ಪ್ರಸಾದ್ ಹಾಜರಿದ್ದರು.