ಮಡಿಕೇರಿ, ಜು. ೨೯ : ೨೦೨೨-೨೩ನೇ ಸಾಲಿನ ಪಿ.ಯು.ಸಿ. ಪೂರಕ ಪರೀಕ್ಷೆ-೨ ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ನಡೆಸಲಾಗುವುದು. ೨೦೨೨-೨೩ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಫಲಿತಾಂಶ ತಿರಸ್ಕರಿಸಲು ಈ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬAಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ hಣಣಠಿs://ಞseಚಿb.ಞಚಿಡಿಟಿಚಿಣಚಿಞಚಿ.gov.iಟಿ ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಲು ಪ್ರಕಟಣೆ ತಿಳಿಸಿದೆ.